ಅಂಬಾಲ ವಾಯುನೆಲೆಯಲ್ಲಿ ರಫೇಲ್‌ ಯುದ್ಧ ವಿಮಾನಗಳು…

July 29, 2020
7:29 PM

ನವದೆಹಲಿ: ವಿಶ್ವದ ಅತ್ಯಾಧುನಿಕ ಯುದ್ಧ ವಿಮಾನವಾದ ರಫೇಲ್‌ ಹೊಂದುವ ಭಾರತೀಯ ವಾಯುಪಡೆಯ ಕನಸು ಕೊನೆಗೂ ನನಸಾಗಿದೆ.  5 ಯುದ್ಧ ವಿಮಾನಗಳು ಬುಧವಾರ ಹರ್ಯಾಣದ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್‌ಕೆಎಸ್ ಭದೌರಿಯ ಸೇರಿದಂತೆ ವಾಯುಸೇನೆಯ ಹಿರಿಯ ಅಧಿಕಾರಿಗಳು ವಾಯುನೆಲೆಯಲ್ಲಿ ಉಪಸ್ಥಿತರಿದ್ದರು.

ಫ್ರಾನ್ಸ್‌ನ ಡಸಾಲ್ಟ್‌ ಏವಿಯೇಷನ್‌ ನಿರ್ಮಿತ ರಫೆಲ್‌ ಯುದ್ಧವಿಮಾನವು ಭಾರತವನ್ನು ತಲುಪಿದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಐದು ರಫೇಲ್ ಯುದ್ಧ ವಿಮಾನಗಳು ಹರಿಯಾಣಕ್ಕೆ ತಲುಪಿವೆ. ಈ ಮೂಲಕ ಭಾರತೀಯ ಸೇನೆಯ ಇತಿಹಾಸದಲ್ಲೇ ಹೊಸ ಶಕೆ ಆರಂಭವಾಗಲಿದೆ ಎಂದು ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದಾರೆ.

4 ವರ್ಷಗಳ ಹಿಂದೆ ಭಾರತ ಸರ್ಕಾರ 59000 ಕೋಟಿ ರು. ವೆಚ್ಚದಲ್ಲಿ 36 ರಫೇಲ್‌ ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು. ಈ ಪೈಕಿ ಮೊದಲ 5 ವಿಮಾನ ಇದೀಗ ಹಸ್ತಾಂತರವಾಗಿದೆ. ಉಳಿದ ಎಲ್ಲಾ ವಿಮಾನಗಳು 2021ರ ಅಂತ್ಯದೊಳಗೆ ಭಾರತಕ್ಕೆ ಬರಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror