ಬೆಳ್ಳಾರೆ : ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದೊಂದಿಗೆ ದೈವಜ್ಞರಾದ ದಾಮೋದರ ಬಿ.ಕೆ ಕೊಳತ್ತೂರು ಹಾಗು ಶ್ರೀಧರ ಪೆರುಂಬಾಳ್ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ಅಷ್ಟಮಂಗಲ ಪ್ರಶ್ನಾ ಚಿಂತನ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚಿಂತಸಿ ನಡೆಸಿದ ಅಷ್ಠಮಂಗಲ ಪ್ರಶ್ನಾ ಚಿಂತನೆಯಲ್ಲಿ ದೈವ್ಜಜ್ಞರು ಹಾಗು ಭಕ್ತವೃಂದದವರ ಮಧ್ಯೆ ಪ್ರಶ್ನೋತ್ತರ ಹಾಗು ಚರ್ಚೆ ನಡೆಯಿತು. ವೇದಿಕೆಯಲ್ಲಿ ಎ.ಕೆ ಮಣಿಯಾಣಿ ಉಪಸ್ಥಿತರಿದ್ದರು. ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ ಸದಸ್ಯರು ಸೇರಿದಂತೆ ಐವತ್ತಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಅಜಪಿಲದಲ್ಲಿ ಅಷ್ಠಮಂಗಲ ಪ್ರಶ್ನಾ ಚಿಂತನೆ"