ಅಜ್ಜಾವರ ಹಾಲು ಸೊಸೈಟಿಗೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ

August 24, 2019
10:08 AM

ಅಜ್ಜಾವರ:ಅಜ್ಜಾವರ ಹಾಲು ಉತ್ಪಾದಕರ ಸಂಘಕ್ಕೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

Advertisement

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಅವಿಶ್ವಾಸ ಮಂಡನೆ ಸಹಿತ ಇತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೇ ಸಂದರ್ಭ ಸಹಕಾರಿ ಸಂಘಗಳ ಉಪನಿಬಂಧಕರು ಸಂಘದ ಕಚೇರಿಯಲ್ಲಿ ನಿರ್ದೇಶಕರು ಮತ್ತು ಸದಸ್ಯರನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಕಾನೂನು ಮೀರಿ ಯಾವುದೂ ಕೂಡಾ ನಡೆಯಲು ಸಾಧ್ಯವಿಲ್ಲ, ಇದಕ್ಕಾಗಿ ಒತ್ತಡ ತಂದರೂ ಆಗದು. ಕಾನೂನು ಚೌಕಟ್ಟು ಒಳಗಡೆ ಸಹಕಾರಿ ಸಂಘದ ಕೆಲಸಗಳು ನಡೆಯಬೇಕು, ಆಡಳಿತ ಮಂಡಳಿ, ಕೃಷಿಕರು, ಹೈನುಗಾರರ ನಡುವೆ ಸಮನ್ವಯತೆ ಬೇಕು ಎಂದು ಸೂಚಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ದುರ್ಗೇಶ್ ಅಡ್ಪಾಂಗಾಯ, ಕಾರ್ಯದರ್ಶಿ ಚೈತ್ರ, ರವೀಶ್ ಮಾವಿನಪಳ್ಳ , ಬಾಲಚಂದ್ರ ಮುಡೂರು , ಶಾಂತಪ್ಪ , ಲೀಲಾವತಿ ,ನಾರಾಯಣ, ಪೂರ್ಣಿಮ ,ಭಾಗೀರಥಿ , ಅಬ್ಬಾಸ್ , ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಅಡ್ಪಂಗಾಯ , ಗಣೇಶ್ , ಮಾಜಿ ಸದಸ್ಯರಾದ ಚಂದ್ರಶೇಖರ , ಮತ್ತಿತರು ಉಪಸ್ಥಿತರಿದ್ದರು ಮತ್ತು ಸಂಘದ ಸರ್ವಸದಸ್ಯರು ಹಾಜರಿದ್ದರು. ಸಹಕಾರಿ ಸಂಘಗಳ ಇಲಾಖೆಯಿಂದ ಮಂಜುನಾಧ್  ಮತ್ತು ತ್ರೀವೇಣಿ  ಆಗಮಿಸಿದ್ದರು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror