ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಯನ್ನು ತೊರೆಯಲು ನಿರ್ಧರಿಸಿದ್ದಾರೆ. ಮಂಗಳವಾರ ಡಿಜಿಪಿಗೆ ರಾಜೀನಾಮೆ ರವಾನಿಸಿದ ಅವರು ನಿರ್ಧಿಷ್ಟ ಕಾರಣ ಕೊಟ್ಟಿಲ್ಲ. ಉಡುಪಿ, ಚಿಕ್ಕಮಗಳೂರು ಎಸ್ ಪಿ ಆಗಿದ್ದ ಅಣ್ಣಾಮಲೈ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು. ರಾಜೀನಾಮೆ ಅಂಗೀಕಾರಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರಣ ತಿಳಿಸುವುದಾಗಿ ಹೇಳಿದ್ದಾರೆ.
ಸದ್ಯ ಅಣ್ಣಾಮಲೈ ಬೆಂಗಳೂರು ಕಮಿಷನರೇಟ್ ನಲ್ಲಿ ಡಿಸಿಪಿಯಾಗಿ ಕೆಲಸ ಮಾಡುತ್ತಿದ್ದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜಿನಾಮೆ"