ಅನ್ವೇಷಣಾ-2019 ಅಗ್ರಿ ಟಿಂಕರಿಂಗ್ ಫೆಸ್ಟ್ ಸಮಾರೋಪ- ಪ್ರತಿಭೆಗಳನ್ನು ಗುರುತಿಸುವ ಕಾರ್ಯವಾಗಿದೆ: ಸತೀಶ್ಚಂದ್ರ

December 2, 2019
1:12 PM

ಪುತ್ತೂರು: ಮಕ್ಕಳಲ್ಲಿನ ಅದ್ಭುತ ಪ್ರತಿಭೆಗಳನ್ನು ಗುರುತಿಸುವ ಕಾರ್ಯವಾಗಿದೆ. ಇದರಿಂದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂರಂತಹ ವಿಜ್ಞಾನಿಗಳನ್ನು ವಿದ್ಯಾರ್ಥಿಗಳಲ್ಲಿ ಸೃಷ್ಟಿಸುವ ವೈಶಿಷ್ಟಪೂರ್ಣ ಕಾರ್ಯಕ್ರಮ ಇದಾಗಿದೆ. ಜೊತೆಗೆ ಅನ್ವೇಷಣಾ ಮನೋಭಾವವನ್ನು ಮಕ್ಕಳಿಂದ ಹಿಡಿದು ಹಿರಿಯವರ ತನಕ ಬೆಳೆಸುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು.

Advertisement
Advertisement
Advertisement

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ನೇತೃತ್ವದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಅನ್ವೇಷಣಾ-2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನ ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ರವಿವಾರ ಮಾತನಾಡಿದರು. ಕೃಷಿಯಲ್ಲಿ ನೂತನ ಅನ್ವೇಷಣೆಗಳಿಗೆ ವೇದಿಕೆಯನ್ನು ಒದಗಿಸಿ ಚಾಲನೆ ನೀಡಿದ ಹೆಗ್ಗಳಿಕೆ ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಸಲ್ಲುತ್ತದೆ ಎಂದು ತಿಳಿಸಿದರು.

Advertisement

ದಕ್ಷಿಣಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರವಿರಾಜ್ ಹೆಗ್ಡೆ ಮಾತನಾಡಿ, ಅನ್ವೇಷಣಾದಲ್ಲಿ ನವ ನವೀನ ಮಾದರಿಗಳಿಗೆ ಉತ್ತಮ ಮಾರುಕಟ್ಟೆ ಲಭ್ಯವಾಗುವಂತೆ ಮಾಡಿದೆ ಎಂದರಲ್ಲದೆ, ಮಂಗಳೂರಿನ ರಿಸರ್ಚ್ ಮತ್ತು ಡೆವಲಪ್ಮೆಂಟ್ ಫಂಡ್‍ಗಳ ಬಳಕೆ ಮತ್ತು ಪ್ರೋತ್ಸಾಹಕ್ಕಾಗಿ ಬಳಸುವ ಯೋಜನೆ ಬಗ್ಗೆ ತಿಳಿಸಿದರು. ಲಘು ಉದ್ಯೋಗ ಭಾರತಿ ಕರ್ನಾಟಕ ಇದರ ಉಪಾಧ್ಯಕ್ಷ ಬಿ.ಎಸ್. ಶ್ರೀನಿವಾಸನ್ ಮಾತನಾಡಿ, ಅನ್ವೇಷಣ ಆಯೋಜನೆಗೆ ಧನ್ಯವಾದ ತಿಳಿಸಿದರು. ಲಘು ಉದ್ಯೋಗ ಭಾರತಿಯಿಂದ ಪೇಟೆಂಟ್ ನೀಡುವ ಭರವಸೆಯನ್ನು ನೀಡಿದರು. ಅನ್ವೇಷಣೆಯನ್ನು ದ್ವಿಗುಣಗೊಳಿಸಿ ಕೃಷಿಯು ಶೀಘ್ರದಲ್ಲೇ ಬೆಳೆಯುವಂತೆ ಸಹಾಯಕವಾಗಲಿ ಎಂದು ತಿಳಿಸಿದರು.

Advertisement

ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಮಾತನಾಡಿ, ಕೃಷಿಯ ಕಡೆಗೆ ವಿದ್ಯಾರ್ಥಿಗಳ ದೃಷ್ಟಿ ಸಾಗಲಿ. ಕೃಷಿಯ ಮಾದರಿಗಳು ಶೀಘ್ರವೇ ಮಾರುಕಟ್ಟೆಗೆ ಬರಲಿವೆ ಎಂಬ ಅಭಿಲಾಷೆಯೊಂದಿಗೆ ಇದು ರೈತರ ಬಾಳಿಗೆ ಬೆಳಕಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಾಲ್ಕು ವಿಭಾಗದ ವಿಜೇತರಿಗೆ ಬಹುಮಾನ ವಿತರಣೆಯೂ ನಡೆಯಿತು ಹಾಗೂ ಹೊಸ ಆವಿಷ್ಕಾರಗಳ ದತ್ತು ಸ್ವೀಕಾರ ಕಾರ್ಯವೂ ನಡೆಯಿತು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್‍ಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಎರಡು ದಿನ ನಡೆದ ಅನ್ವೇಷಣಾ-2019ರ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳು ಉದ್ಯೋಗ ಹುಡುಕುವುದನ್ನು ಬಿಟ್ಟು ಉದ್ಯೋಗ ಸೃಷ್ಟಿಯನ್ನು ಮಾಡಬೇಕೆಂಬ ಆಶಯವೇ ಅನ್ವೇಷಣಾ-2019ಎಂದು ಹೇಳಿದರು.

Advertisement

ಶಾಲಾ ಆಡಳಿತ ಮಂಡಳಿ ಸದಸ್ಯರಾದ ವಸಂತಿ ಕೆದಿಲ ಅವರು ಸ್ವಾಗತಿಸಿದರು. ಶಿಕ್ಷಕಿಯರಾದ ಸುಗಿತಾ ರೈ, ಶಾಂತಿ ಹಾಗೂ ದೀಪ್ತಿ ಭಟ್ ವಿಜೇತರ ಪಟ್ಟಿಯನ್ನು ವಾಚಿಸಿದರು. ದತ್ತು ಸ್ವೀಕಾರದ ಪಟ್ಟಿಯನ್ನು ಭರತ್ ಪೈ ಅವರು ನೀಡಿದರು. ಕಾರ್ಯಕ್ರಮವನ್ನು ಸೌಮ್ಯ ಹಾಗೂ ಯಶೋಧ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ
ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ
August 27, 2024
3:29 PM
by: The Rural Mirror ಸುದ್ದಿಜಾಲ
ಬದನಾಜೆ ಶಂಕರ್ ಭಟ್ | ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ | ಆ.18 ಕ್ಕೆ ನರೇಂದ್ರ ರೈ ದೇರ್ಲ ಅವರ ಪುಸ್ತಕ ಬಿಡುಗಡೆ |
August 14, 2024
3:40 PM
by: The Rural Mirror ಸುದ್ದಿಜಾಲ
ವಿಜೃಂಭಣೆಯಿಂದ ನಡೆಯಲಿದೆ ಈ ಬಾರಿಯ ದಸರಾ ನಾಡಹಬ್ಬ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
August 13, 2024
10:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror