ಸುಳ್ಯ: ಗ್ರಾಮೀಣ ಜನರ ಆರ್ಥಿಕ ಮಟ್ಟ ಹಾಗೂ ಜೀವನ ಭದ್ರತೆಗೆ ಸಹಕಾರಿ ಸಂಘಗಳ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.
ಅವರು ಶನಿವಾರ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡು ದಿನಗಳ ಶತ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರಕಾರಗಳು ಯಾವುದೇ ಕೆಲಸ ಮಾಡಿದರೂ ಜನರ ಸಹಭಾಗಿತ್ವ ಇದ್ದರೆ ಮಾತ್ರಾ ಯಶಸ್ಸಾಗುತ್ತದೆ. ಆದರೆ ಸಹಕಾರಿ ಸಂಘಗಳು ಯಾವುದೇ ಕೆಲಸ ಮಾಡಿದರೂ ಅದು ಜನರ ಭಾಗವಾಗಿರುತ್ತದೆ ಹಾಗಾಗಿ ಯಶಸ್ಸು ಸಾಧ್ಯವಾಗುತ್ತದೆ ಎಂದರು.
ಈ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದ ಗಿರೀಶ್ ಭಾರದ್ವಾಜ್ ಮತ್ತು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್‌ಕುಮಾರ್ ಕಟೀಲ್, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ, ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ್ ಭಾಗವಹಿಸಿದರು.
ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಅರಂತೋಡು-ತೊಡಿಕಾನ ಸಹಕಾರಿ ಸಂಘದ ಶತಸಂಭ್ರಮ"