ಅರೆಭಾಷೆ ಅಕಾಡೆಮಿ ನೇಮಕಾತಿಗೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

October 16, 2019
12:58 PM

ಸುಳ್ಯ: ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯ ಪಟ್ಟಿ ಹೊರ ಬೀಳುತ್ತಿದ್ದಂತೆ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ.

Advertisement

ಪಕ್ಷದ ಗಮನಕ್ಕೆ ಬಾರದೇ ನೇಮಕಾತಿ ನಡೆದಿದೆ ಎಂಬುದು ಪಕ್ಷದ ಮುಖಂಡರ ಆಕ್ಷೇಪ. ಅರೆ ಭಾಷಿಕರಾದ ಗೌಡ ಸಮುದಾಯದ ಹಲವು ಮಂದಿ ನಾಯಕರು ಬಿಜೆಪಿಯಲ್ಲಿದ್ದಾರೆ‌. ಅವರಲ್ಲಿ ಕೆಲವರಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷತೆ, ಸದಸ್ಯತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷದ ಸಕ್ರೀಯ ನಾಯಕರನ್ನು, ಸದಸ್ಯರನ್ನು ನೇಮಕಾತಿ ಸಂದರ್ಭ ಕಡೆಗಣಿಸಲಾಗಿದೆ ಎಂಬ ಆರೋಪ, ಆಕ್ರೋಶ ಇದೀಗ  ಕೆಲವು ನಾಯಕರಲ್ಲಿ ಮತ್ತು  ಕಾರ್ಯಕರ್ತರಲ್ಲಿ ಉಂಟಾಗಿದೆ.

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಸುಳ್ಯದಲ್ಲಿ ಭಾರೀ ಆಕ್ರೋಶ ಅಸಮಾಧಾನ ಉಂಟಾಗಿತ್ತು. ಅದು ಸ್ವಲ್ಪ ತಣ್ಣಗಾಗಿರುವ ಸಂದರ್ಭದಲ್ಲಿ ಅರೆಭಾಷೆ ಅಕಾಡೆಮಿ ನೇಮಕ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕೆಲವು ಮಂದಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯತ್ವಕ್ಕೆ ತೆರೆಮರೆಯಲ್ಲಿ ಪ್ರಯತ್ನವೂ ನಡೆಸಿದ್ದರು. ಆದರೆ ಇದೀಗ ಹೊರ ಬಂದಿರುವ ಪಟ್ಟಿ ಸುಳ್ಯ ಬಿಜೆಪಿಗರಿಗೆ ಅಚ್ಚರಿ ಮೂಡಿಸಿದೆ.

ಈ ಹಿಂದೆ‌‌‌ ಡಿಸಿಸಿ ಬ್ಯಾಂಕ್ ಚುನಾವಣೆ, ಸುಳ್ಯ ಶಾಸಕ ಅಂಗಾರ ಅವರಿಗೆ‌ ಸಚಿವ ಸ್ಥಾನ ಸೇರಿದಂತೆ ಇದೀಗ ಅರೆಭಾಷೆ ಅಕಾಡೆಮಿ ಆಯ್ಕೆ ಕೂಡಾ ಅಸಮಾಧಾನಕ್ಕೆ ಕಾರಣವಾಗಿದೆ.

ಅರೆಭಾಷೆ ಅಕಾಡೆಮಿಯ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯ ಮೊದಲು ಮಂಡಲ ಸಮಿತಿಗೆ ತಿಳಿದಿರಲಿಲ್ಲ. ಇದೀಗ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಪಕ್ಷದ ಗಮನಕ್ಕೆ ಬಂದಿದೆ ಈ ಕುರಿತು ಪರಿಶೀಲಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯಿಸಿದ್ದಾರೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ
ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ
July 16, 2025
10:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group