ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿ : ಅರ್ಜಿ ಅಹ್ವಾನ

February 8, 2020
9:59 AM

ಮಂಗಳೂರು : ಅಸಂಘಟಿತ ವಲಯದ ಕಾರ್ಮಿಕರಾದ ಖಾಸಗಿ ವಾಣಿಜ್ಯ ವಾಹನ ಚಾಲಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಮಾರ್ಚ್ 1 ರಂದು ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕಾರ್ಮಿಕರು ದಾಖಲೆಯೊಂದಿಗೆ ಅರ್ಜಿ ನಮೂನೆ 5ನ್ನು ಕಾರ್ಮಿಕ ಅಧಿಕಾರಿ ಕಚೇರಿಯಿಂದ ಪಡೆದುಕೊಂಡು ಕಾರ್ಮಿಕರ ಬಳಿ ಇರುವ ಸ್ಮಾರ್ಟ್ ಕಾರ್ಡ್, ವಿದ್ಯಾರ್ಹತೆಯ ಪ್ರಮಾಣ ಪತ್ರ, ಸರ್ವಿಸ್ ಸರ್ಟಿಫಿಕೇಟ್, ಪೋಲಿಸ್ ಇಲಾಖೆಯಿಂದ ಯಾವುದೇ ಪ್ರಕರಣ ಇರುವುದಿಲ್ಲವೆಂದು ಮೂಲ ಪ್ರಮಾಣ ಪತ್ರವನ್ನು, ವೃತ್ತಿಯ ಬಗ್ಗೆ ತರಬೇತಿ ಪಡೆದ ಪ್ರಮಾಣ ಪತ್ರಗಳಿದ್ದಲ್ಲಿ ಲಗತ್ತಿಸಿ ಫೆಬ್ರವರಿ 18 ರೊಳಗೆ ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್‍ಬೀಡಿ ಎದುರು, ಬಂಟ್ಸ್‍ಹಾಸ್ಟೇಲ್, ಮಂಗಳೂರು-575003 ಕಚೇರಿಗೆ  ಸಲ್ಲಿಸಬೇಕೆಂದು ಮಂಗಳೂರು, ದ.ಕ ಜಿಲ್ಲೆ, ಕಾರ್ಮಿಕ ಅಧಿಕಾರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror