ಅಸ್ಸಾಂನಲ್ಲಿ ಭೀಕರ ಮಳೆ- ಪ್ರವಾಹ | 107 ಮಂದಿ ಪ್ರವಾಹಕ್ಕೆ ಬಲಿ |

July 19, 2020
9:08 PM

ಅಸ್ಸಾಂ: ಭಾರೀ ಮಳೆಯಿಂದ ಅಸ್ಸಾಂ ರಾಜ್ಯ ತತ್ತರಿಸಿದೆ. ಭಾರೀ ಮಳೆಯಿಂದ ಪ್ರವಾಹ ಸ್ಥಿತಿ ಉಂಟಾಗಿದ್ದು  ಇದುವರೆಗೆ  107 ಜನರು ಮೃತಪಟ್ಟಿದ್ದಾರೆ. ಪ್ರವಾಹದ ಹೊಡೆತಕ್ಕೆ  ಕಾಡು ಪ್ರಾಣಿಗಳೂ ಕೂಡ ಸಾವನ್ನಪ್ಪಿವೆ ಎಂದು ಸರ್ಕಾರದ ವರದಿ ತಿಳಿಸಿದೆ.

Advertisement

ಅಸ್ಸಾಂನ 30 ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ.  ನೆರೆಯಿಂದಾಗಿ ಭೂ ಕುಸಿತ ಉಂಟಾಗಿ  26 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲಾಡಳಿತದೊಂದಿಗೆ ರಾಜ್ಯ ವಿಪತ್ತು ದಳದ ಸಿಬ್ಬಂದಿ 2,389 ಜನರನ್ನು ರಕ್ಷಿಸಲಾಗಿದೆ. ಪ್ರಸ್ತುತ ಅಸ್ಸಾಂನ 3,014 ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿದ್ದು, 1,27,955,33 ಹೆಕ್ಟೇರ್‌ ಕೃಷಿ ಭೂಮಿ ನೀರಿನಿಂದ ಜಲಾವೃತಗೊಂಡಿದೆ. 487 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1.25 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.

ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮುಳುಗಡೆಯಾಗಿದ್ದು, 76 ಪ್ರಾಣಿಗಳು ಮೃತಪಟ್ಟಿವೆ. 170 ಪ್ರಾಣಿಗಳನ್ನು ರಕ್ಷಿಸಲಾಗಿದೆ. ಖಡ್ಗಮೃಗಗಳ ಮುಖ್ಯ ಆವಾಸ ಸ್ಥಾನ ಎನಿಸಿರುವ ಉದ್ಯಾನದಲ್ಲಿ ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿವೆ.  82 ಕೃಷ್ಣಮೃಗಗಳು ಸಾವನ್ನಪ್ಪಿವೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group