ಆಕಸ್ಮಿಕ ಬೆಂಕಿ : ಕರಕಲಾದ ವಾಹನ

November 7, 2019
9:58 PM

ಮಡಿಕೇರಿ : ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಸಂಪೂರ್ಣ ವಾಹನವೇ ಕರಕಲಾದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕಿನ ಕಂಡಂಗಾಲ ಗ್ರಾಮದವರಾದ ನಂಬುಡುಮಾಡ ಮನು ಅವರು ಮೈಸೂರಿನಲ್ಲಿ ನೆಲೆಸಿದ್ದು, ಇವರು ಸಂಬಂಧಿಕರ ಮದುವೆಗೆಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು.

ಇವರು ನಿನ್ನೆ ಸಂಜೆ ಕಂಡಂಗಾಲದಿಂದ ವಿರಾಜಪೇಟೆಯಲ್ಲಿ ಆಯೋಜಿತ ಮದುವೆಗೆ ಆಗಮಿಸುತಿದ್ದ ವೇಳೆ ಕಂಡಂಗಾಲ – ಬಿ.ಶೆಟ್ಟಿಗೇರಿ ಮುಖ್ಯ ರಸ್ತೆ ಬಳಿ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೆ ಮನು ಅವರು ವಾಹನದಿಂದಿಳಿದಿದ್ದಾರೆ. ಕ್ಷಣ ಮಾತ್ರದಲ್ಲಿ ಬೆಂಕಿ ವಾಹನವನ್ನು ಆವರಿಸಿಕೊಂಡು ಇಡೀ ವಾಹನ ಸುಟ್ಟು ಕರಕಲಾಗಿತ್ತು.
ವಿಷಯ ತಿಳಿದು ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳೊಂದಿಗೆ ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರಾದರು, ಅಷ್ಟರಲ್ಲೆ ವಾಹನ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror