ಆ.31 : ಸಿದ್ಧರಾಮಯ್ಯ ಭೇಟಿ ಹಿನ್ನಲೆ- ಸುಳ್ಯ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವ ಭಾವಿ ಸಭೆ

August 28, 2019
10:43 PM

ಸುಳ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಆ.31ಕ್ಕೆ ದ.ಕ ಜಿಲ್ಲೆಗೆ ಭೇಟಿ ನೀಡಿ ನೆರೆ ಬಾಧಿತ ಪ್ರದೇಶಕ್ಕೆ ತೆರಳಿ ಸಮೀಕ್ಷೆ ನಡೆಸಲಿದ್ದಾರೆ . ಬಳಿಕ ಅಪರಾಹ್ನ 3:00 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪಾಲ್ಗೊಳ್ಳಲಿದ್ದಾರೆ .
ಈ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಬಾವಿ ಸಭೆ ನಡೆಯಿತು‌.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸುಳ್ಯ ಬ್ಲಾಕ್ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ನಾಯಕರು , ಕಾರ್ಯಕರ್ತರು ಭಾಗವಹಿಸಿ ರಾಜ್ಯದಲ್ಲಿ , ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಸಹಕಾರ ನೀಡಬೇಕೆಂದು ವಿನಂತಿಸಿದರು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಮಹಮದ್ ಆಲಿ ಪುತ್ತೂರು , ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.‌ವೆಂಕಪ್ಪ ಗೌಡ , ಕೃಷ್ಣಪ್ಪ ಗೌಡ ನೆಕ್ರಾಪ್ಪಾಡಿ , ಬೀರಾ ಮೊಯಿದೀನ್ , ಶಾಫಿ ಕುತ್ತಮೊಟ್ಟೆ , ನಂದರಾಜ ಸಂಕೇಶ , ಭವಾನಿಶಂಕರ ಕಲ್ಮಡ್ಕ , ಜೂಲಿಯ ಕ್ರಾಸ್ತಾ , ಮಹಮ್ಮದ್ ಫವಾಜ್ , ರಜಾಕ್ ಪೈಚಾರು , ಗಂಗಾಧರ ಮೇನಾಲ , ಶ್ರೀಲತಾ ಪ್ರಸನ್ನ, ಹನೀಫ್ ಪುಣ್ಚತ್ತಾರು, ಮೊದಲಾದವರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಸ್ವಾಗತಿಸಿ , ಕೆ ಎಂ ಮುಸ್ತಫ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror