ಇಂದು ಚಂದ್ರಗ್ರಹಣ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಾತ್ರಿ ಪೂಜಾ ಸಮಯ ಬದಲು

July 16, 2019
7:30 AM

ಸುಳ್ಯ: ಚಂದ್ರಗ್ರಹಣದ ಹಿನ್ನೆಲೆಯಲ್ಲಿ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಸಮಯದಲ್ಲಿ  ಬದಲಾವಣೆಯಾಗಲಿದೆ.

ಮಂಗಳವಾರ ರಾತ್ರಿ 1.33ರಿಂದ 4.32ರವರೆಗೆ ಚಂದ್ರಗ್ರಹಣ ನಡೆಯುವ ಹಿನ್ನೆಲೆಯಲ್ಲಿ  ಕೆಲವು ದೇವಾಲಯಗಳ ಪೂಜಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ರಾತ್ರಿ 7ಕ್ಕೆ ನಡೆಯುವ ಮಹಾಪೂಜೆ ಸಂಜೆ 6.30ಕ್ಕೆ ನಡೆಯಲಿದೆ. 7 ಗಂಟೆ ಬಳಿಕ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ. ಸಂಜೆಯ ಆಶ್ಲೇಷಾ ಬಲಿ ಸೇವೆ ಹಾಗೂ ರಾತ್ರಿಯ ಭೋಜನ ವ್ಯವಸ್ಥೆಯೂ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ. ಮಧ್ಯಾಹದವರೆಗಿನ ಪೂಜಾ ಅವಧಿ ಮತ್ತು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಚಂದ್ರಗ್ರಹಣ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ಪೂಜೆ ಮತ್ತು ದೇವರ ದರ್ಶನ ಇರುತ್ತದೆ. ಚಂದ್ರಗ್ರಹಣ ಮಧ್ಯರಾತ್ರಿ ಆಗುವುದರಿಂದ ರಾತ್ರಿ 9 ಗಂಟೆ ತನಕವೂ ಅನ್ನಛತ್ರದಲ್ಲಿ ಎಂದಿನಂತೆ ಅನ್ನ ದಾಸೋಹ ಇರಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror