ಇವತ್ತು ನಮಗೆ ಮಳೆಯುಂಟೋ ಇಲ್ವೋ….? ಏನು ಹೇಳುತ್ತದೆ ವೆದರ್ ರಿಪೋರ್ಟ್…?

April 29, 2020
4:22 PM

ಮಂಗಳೂರು: ವೆದರ್ ರಿಪೋರ್ಟ್ ಪ್ರಕಾರ ಇನ್ನು 3 ದಿನಗಳ ಕಾಲ ರಾಜ್ಯದ ವಿವಿದೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಕಾಸರಗೋಡು, ಬದಿಯಡ್ಕ, ಮುಳ್ಳೇರಿಯ, ಉಡುಪಿ ಹಾಗೂ ದ. ಕ. ಜಿಲ್ಲೆಯಾದ್ಯಂತ ಮೋಡದ ವಾತಾವರಣ ಇರಬಹುದು. ಸಾಗರ ಹಾಗೂ ಹೊಸನಗರ ಭಾಗಗಳಲ್ಲೂ ಸಾಧಾರಣ ಮಳೆ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಉಪಗ್ರಹ ಚಿತ್ರ  ಆಧರಿಸಿ ದಕ್ಷಿಣ ಕನ್ನಡ ಜಿಲ್ಲೆಯ ವೆದರ್ ಬಗ್ಗೆ ಮಾಹಿತಿ ನೀಡಿದ ಕೃಷಿಕ ಸಾಯಿಶೇಖರ್ ಹೀಗೆ ಹೇಳಿದ್ದಾರೆ..

 

ಇದರ ಜೊತೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇದೆ. ಇನ್ನು 2 ಅಥವಾ 3 ದಿವಸಗಳಲ್ಲಿ ಸರಿಯಾದ ಚಿತ್ರಣ ಸಿಗಬಹುದು.ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಂಡೋಮಾನ್, ನಿಕೋಬರ್ ನಲ್ಲಿ ವಾಯುಭಾರ ಕುಸಿತ ಉಂಟಾಗಿದೆ.

ಬೆಂಗಳೂರಿನಲ್ಲಿ  ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ ಧಾರಾಕಾರ ಮಳೆ ಸುರಿದಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಜಿಲ್ಲೆಗಳಲ್ಲಿ ಕೂಡಾ ಮಳೆಯಾದ ವರದಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದೆ. ಜಿಲ್ಲೆಯ ಕೆಲವೆಡೆ ನಿನ್ನೆ ಸಂಜೆ ವೇಳೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ ಸುರಿದಿದ್ದು, ಸಿಡಿಲಿಗೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror