ಸುಳ್ಯದ ತ್ಯಾಜ್ಯ ನೋಡಿ ಗರಂ ಆದ ಉಸ್ತುವಾರಿ ಸಚಿವರು ಹೇಳಿದ್ದೇನು….?

Advertisement

ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ರಾಶಿಯನ್ನು ಕೂಡಲೇ ತೆರವು ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.

Advertisement

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಸಭೆಗೆ ಆಗಮಿಸಿದ ಸಂದರ್ಭ ಕಳೆದ ಹಲವು ತಿಂಗಳಿನಿಂದ ನಗರ ಪಂಚಾಯತ್ ವ್ಯಾಪ್ತಿಯ ಕಸವು ನ.ಪಂ.ಮುಂಭಾಗದ ವಾಹನ ನಿಲುಗಡೆ ಕಟ್ಟಡದಲ್ಲಿ ಶೇಖರಣೆ ಆಗಿರುವುದನ್ನು ಮಾಧ್ಯಮ ಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಈ ಹಿನ್ನಲೆಯಲ್ಲಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಂಬಿ ತುಳುಕಿ ದುರ್ವಾಸನೆ ಬೀರುವ ತ್ಯಾಜ್ಯ ರಾಶಿ, ಗುಯಿಂಗುಟ್ಟಿ ಹಾರುವ   ನೊ ಣಗಳ ಕಲರವನ್ನು ನೋಡಿ ಗರಂ ಆದ ಸಚಿವರು ನಗರ ಪಂಚಾಯತ್ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡರು.

Advertisement
Advertisement

 

Advertisement

 

ಕಚೇರಿಯ ಮುಂಭಾಗದಲ್ಲಿ ಈ ರೀತಿ ಕಸ ರಾಶಿ ಯಾಕೆ ತುಂಬಿದ್ದು ಇದರ ವಿಲೇವಾರಿಗೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ರೀತಿಯ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ ಅತೀ ಶೀಘ್ರ ಇದನ್ನು ವಿಲೇವಾರಿಗೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.

Advertisement

ಕಸ ವಿಲೇವಾರಿಗೆ ಸ್ಥಳ ಇಲ್ಲದಿರುವ ಬಗ್ಗೆ ಮತ್ತು ವೈಜ್ಞಾನಿಕವಾಗಿ ಕಸ ವಿಲೇವಾರಿ ಆಗದ ಬಗ್ಗೆ ಜನಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಕಸ ವಿಲೇವಾರಿಗೆ ಸೂಕ್ತ ಜಾಗ ಗುರುತಿಸಲು ಸಚಿವರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಎಸ್.ಅಂಗಾರ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಬಿ.ಸದಾಶಿವ, ಶಾಫಿ ಕುತ್ತಮೊಟ್ಟೆ ಮತ್ತಿತರರು ಉಪಸ್ಥಿತರಿದ್ದರು.

Advertisement

 

Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಸುಳ್ಯದ ತ್ಯಾಜ್ಯ ನೋಡಿ ಗರಂ ಆದ ಉಸ್ತುವಾರಿ ಸಚಿವರು ಹೇಳಿದ್ದೇನು….?"

Leave a comment

Your email address will not be published.


*