ಉರಗತಜ್ಞ ಎಂ.ಪಿ. ವಾಸುದೇವ ಇನ್ನಿಲ್ಲ

September 28, 2019
11:06 AM

ಸುಳ್ಯ: ಖ್ಯಾತ ಉರಗತಜ್ಞ, ಸಾಮಾಜಿಕ ಕಾರ್ಯಕರ್ತ ಸುಳ್ಯ ಕೇರ್ಪಳ ನಿವಾಸಿ ಎಂ.ಪಿ. ವಾಸುದೇವ(58) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ‌. ಕೆಲ ಸಮಯಗಳಿಂದ ಅಸೌಖ್ಯದಿಂದಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು. ನಿನ್ನೆ ಆರೋಗ್ಯ ಮತ್ತೆ ಹದಗೆಟ್ಟು, ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು.

Advertisement

ಸುಳ್ಯದಲ್ಲಿ ಹಲವು ವರ್ಷದಿಂದ ತರಂಗಿಣಿ ಕೆಟರಿಂಗ್ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದ ವಾಸುದೇವರು ಉರಗ ತಜ್ಞರಾಗಿಯೂ ಖ್ಯಾತರಾಗಿದ್ದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಮೂಲಕ ಗಮನ ಸೆಳೆದಿದ್ದರು. ಮೂರು ಬಾರಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಪಕ್ಷೇತರರಾಗಿ ಸ್ಫರ್ಧಿಸಿದ್ದರು. ಹಾವುಗಳನ್ನು ಹಿಡಿಯುವುದರಲ್ಲಿ ನಿಸ್ಸೀಮರಾಗಿದ್ದ ಅವರು ಸಾವಿರಾರು ಹಾವುಗಳನ್ನು ಹಿಡಿದು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದರು. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದ ಅವರು ಕೆಲವು ವರ್ಷಗಳ ಹಿಂದೆ ಸುಳ್ಯದಲ್ಲಿ ವಿನೂತನ ಬೀಚ್ ಕಬಡ್ಡಿಯನ್ನು ಸಂಘಟಿಸಲು ನೇತೃತ್ವ ವಹಿಸಿದ್ದರು.
ಮೃತರು ಪತ್ನಿ ವಾರಿಜಾ, ಪುತ್ರಿ ವಿಸ್ಮಿತಾ, ಪುತ್ರ ವಿನೀತ್‌ರನ್ನ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಭಾದೆ
July 17, 2025
9:02 PM
by: The Rural Mirror ಸುದ್ದಿಜಾಲ
ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |
July 17, 2025
8:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group