ಎಡಮಂಗಲ ಎಡಮಂಗಲ ಗ್ರಾಮ ಪಂಚಾಯ್ತಿಯ 2019-20ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಥಮ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಪಂಚಾಯ್ತಿ ಅಧ್ಯಕ್ಷ ಸುಂದರ ಗೌಡ ದೋಳ್ತಿಲ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ಗ್ರಾಮ ಸಂಪನ್ಮೂಲ ವ್ಯಕ್ತಿ ಜಯರಾಮ ಬಿ ನಾರ್ಕೋಡು ಯೋಜನೆಯ ಬಗ್ಗೆ ವರದಿ ಮಂಡಿಸಿದರು. ತಾಲೂಕು ಸಂಯೋಜಕ ರೋಹಿತ್ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ನೋಡೆಲ್ ಅಧಿಕಾರಿಯಾಗಿ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಮೇಲ್ವಿಚಾರಕಿ ವಿಜಯ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಓಲ್ಗಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel