ಎನ್ನೆಂಸಿ: ಯುವ ರೆಡ್‍ಕ್ರಾಸ್‍ ಘಟಕದ ವತಿಯಿಂದ ರಕ್ತದಾನಿ ಪಿ ಬಿ ಸುಧಾಕರ ರೈ ಅವರಿಗೆ ಸನ್ಮಾನ

July 3, 2019
9:00 AM

ಸುಳ್ಯ :  ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್‍ ಘಟಕದ ವತಿಯಿಂದ 105 ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿ ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿರುವ ಸುಳ್ಯದ ವರ್ತಕರ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ ರೈ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ಮಾತನಾಡಿ, ಕಾಲೇಜು ದಿನಗಳಿಂದಲೇ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕ್ರೀಡಾಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದವರು. ಇಂದು ರಕ್ತದಾನ ಮಾಡುವ ಮೂಲಕ ಜನರ ಸೇವೆಗೆ ನಿಂತುಎಲ್ಲರೂ ಮೆಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿದ ವರ್ತಕರ ಸಂಘದ ಅಧ್ಯಕ್ಷ, ರಕ್ತದಾನಿ ಪಿ ಬಿ ಸುಧಾಕರರೈ ಮಾತನಾಡಿ, ನನ್ನೆಲ್ಲ ಕೆಲಸಗಳಿಗೆ ನನ್ನ ಮನೆಯೇ ನನಗೆ ಪ್ರೇರಣೆ, ಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ರಕ್ತಕ್ಕೆರಕ್ತವೇ ಪರ್ಯಾಯ. ಹಾಗಾಗಿ ಅನಿವಾರ್ಯವಾದಾಗ ರಕ್ತ ನೀಡುವ ಕಿಂಚಿತ್ ಸೇವೆ ಮಾಡುತ್ತಿದ್ದೇನೆ. 40 ವರ್ಷಗಳಿಂದ ನಿರಂತರವಾಗಿ ಈ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಮನಸ್ಸಿನಲ್ಲಿ ಸಂತೃಪ್ತ ಭಾವ ಇದೆ ಎಂದರು.

ಪ್ರಗತಿಪರ ಕೃಷಿಕ ಪಿ ಬಿ ಪ್ರಭಾಕರ ರೈ, ನಿವೃತ್ತ ಮುಖ್ಯೋಪಾಧ್ಯಾಯ ಜತ್ತಪ್ಪ ಎ ಕೆ.ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿಯವರು ಮಾತನಾಡಿ, ಮಕ್ಕಳಿಗೆ ರಕ್ತದಾನದ ಬಗ್ಗೆ ಪ್ರೇರಣೆ ಮೂಡಿಸುವ ಹಾಗೂ ಸಾಧಕರಿಗೆಇನ್ನಷ್ಟು ಸಾಧನೆಗೆಉತ್ತೇಜನವಾಗಲಿ ಎನ್ನುವ ನಿಟ್ಟಿನಲ್ಲಿಇಂತಹಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆಎಂದರು

ಹವ್ಯಾ ಸ್ವಾಗತಿಸಿ, ಡಯಾನಾ ವಂದಿಸಿದರು. ಸ್ವಾತಿಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror