ಎನ್ನೆಂಸಿ: ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ಪ್ರೇರಣಾ 2019

September 19, 2019
11:00 AM

ಸುಳ್ಯ: ಶಿಕ್ಷಣ ಮತ್ತು ಜೀವನದಲ್ಲಿ ಆಧುನಿಕತೆಯನ್ನು ಬಳಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಇತರೆ ಮೌಲ್ಯಯುತವಾದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ಪ್ರೇರಣಾ 2019ನ್ನು ಆಯೋಜಿಸಿರುವಂತದು ಎಂದು ಅಕಾಡೆಮಿ ಆಫ್‍ ಲಿಬರಲ್‍ ಎಜ್ಯುಕೇಷನ್‍ನ ಅಧ್ಯಕ್ಷ ಡಾ. ಕೆ ವಿ ಚಿದಾನಂದ ಅಭಿಪ್ರಾಯಪಟ್ಟರು.

Advertisement
Advertisement
Advertisement

ಅವರು ಸುಳ್ಯದ ನೆಹರೂ ಮೆಮೋರಿಯಲ್‍ ಕಾಲೇಜಿನ ಸಮಾಜಕಾರ್ಯ ವಿಭಾಗದಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ಸಮಾಜಕಾರ್ಯ ಉತ್ಸವ “ಪ್ರೇರಣಾ 2019” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮವನ್ನು ಡಾ. ಕೆ ವಿ ಚಿದಾನಂದರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಬಳಿಕ ಭಾಗವಹಿಸಿದ ಎಲ್ಲಾ ಕಾಲೇಜಿನ ನಾಯಕ-ನಾಯಕಿಯರು ಹಣತೆಯನ್ನು ಬೆಳಗಿಸಿ ಚಾಲನೆ ನೀಡಿದರು.

Advertisement

ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ, ಕ್ಯಾಂಪಸ್ ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಪ್ರೊ. ಜವರೇಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜಕಾರ್ಯ ವೇದಿಕೆ ಸಂಚಾಲಕಿ ಶ್ರೀಮತಿ ಶೋಭಾ ಎ ಸ್ವಾಗತಿಸಿ, ಸಮಾಜಕಾರ್ಯ ವೇದಿಕೆ ವಿದ್ಯಾರ್ಥಿ ನಾಯಕ ದೀಕ್ಷಿತ್ ಕೆ ಪಿ ವಂದಿಸಿದರು. ವಿದ್ಯಾರ್ಥಿಗಳಾದ ತೇಜಸ್ ಕೆ ಕೆ, ಅರ್ಪಣಾ, ಮೌನವಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ಕೃಪಾ ಎ ಎನ್ ಮತ್ತು ಹೇಮಂತ್‍ ಎನ್ ಎ ಉಪಸ್ಥಿತರಿದ್ದರು. ಸುಳ್ಯ ಮತ್ತು ಮಡಿಕೇರಿ ತಾಲೂಕಿನ 13 ಪದವಿಪೂರ್ವ ಕಾಲೇಜಿನ 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

Advertisement

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ವಹಿಸಿದ್ದರು. ಪ್ರೊ. ಬಾಲಚಂದ್ರಗೌಡ, ಚಂದ್ರ ಕೋಲ್ಚಾರ್, ಭವಾನಿ ಶಂಕರ ಅಡ್ತಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾಜಕಾರ್ಯ ವೇದಿಕೆ ಸಂಚಾಲಕಿ ಶ್ರೀಮತಿ ಶೋಭಾ ಎ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕಿ ಕೃಪಾ ಎ ಎನ್ ಸ್ವಾಗತಿಸಿ, ಮಧುರಾ ಎಂ ಆರ್ ವಂದಿಸಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಮತ್ತುರಕ್ಷಕ – ಶಿಕ್ಷಕ ಸಂಘದ ವತಿಯಿಂದ ಸಮಾಜಕಾರ್ಯ ವಿಭಾಗಕ್ಕೆ ಬೀದಿ ನಾಟಕ ಸಮವಸ್ತ್ರವನ್ನು ಹಸ್ತಾಂತರಿಸಲಾಯಿತು.

Advertisement

ಸ್ಪರ್ಧೆಯಲ್ಲಿ ಸಂಪಾಜೆ ಪದವಿಪೂರ್ವ ಕಾಲೇಜು ಅತ್ಯಧಿಕ ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಪ್ರೊ. ಬಾಲಚಂದ್ರಗೌಡ ಬಹುಮಾನ ವಿತರಿಸಿದರು. ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಸ್ಪರ್ಧೆಯ ತೀರ್ಪುಗಾರರಾಗಿ ನೊಡೆಲ್‍ ಅಧಿಕಾರಿ ಸುಬ್ರಮಣಿ, ಎನ್ನೆಂಸಿ ಉಪನ್ಯಾಸಕಿ ಪ್ರಣೀತಾ, ಚಂದನಾ, ಇನ್ನರ್‍ವ್ಹೀಲ್ ಸದಸ್ಯೆ ಶ್ರೀಮತಿ ಯೋಗಿತಾ ಗೋಪಿನಾಥ್, ಶ್ರೀಮತಿ ಶೈಲಿ ಪ್ರಭಾಕರ್, ಎನ್ನೆಂಸಿ ಉಪನ್ಯಾಸಕಿ ಶ್ರೀಮತಿ ಅಶ್ವಿನಿ, ಮನೋರೋಗ ತಜ್ಞೆ ಡಾ. ಪೂನಂ ಸಹಕರಿಸಿದರು. ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಂಘಟಕರಾಗಿ ಕಾರ್ಯ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror