ಸುಳ್ಯ: ಇತ್ತೀಚೆಗೆ ಅಗಲಿದ ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಪ್ರಭಾಕರ ಭಟ್ ಕಲ್ಲಡ್ಕ “ಸಂಘದ ಮತ್ತು ಬಿಜೆಪಿಯ ಚಟುವಟಿಕೆಗಳಿಗೆ ವಿರೋಧಗಳು ಪ್ರಬಲವಾಗಿದ್ದ ಕಾಲದಲ್ಲಿ ಹಿಂದೂ ಸಮಾಜವನ್ನು ಸಂಘಟಿಸುವಲ್ಲಿ ಎನ್.ಎ.ಸುಂದರ ಅವರು ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ಜೀವನವನ್ನು ಸಮಾಜಕ್ಕಾಗಿ ಮತ್ತು ಸಂಘಟನೆಗಾಗಿ ಮುಡಿಪಾಗಿಟ್ಟಿದ್ದರು ಎಂದು ಸ್ಮರಿಸಿದರು. ತುರ್ತು ಪರಿಸ್ಥಿತಿಯಂತಹ ಸಮಯದಲ್ಲಿಯೂ ಸಂಘಟನೆಯನ್ನು ಕೆಚ್ಚೆದೆಯಿಂದ ಮುನ್ನಡೆಸಿದ್ದರು” ಎಂದು ಅವರು ಹೇಳಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಸುಳ್ಯ ತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು, ಜಿಲ್ಲಾ ಕಾರ್ಯವಾಹ ಸುಭಾಶ್ಚಂದ್ರ ಕಳಂಜ, ಎನ್.ಎ.ಸುಂದರ ಅವರ ಸಹೋದರ ಎನ್.ಎ.ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯಶೋಧಾ ರಾಮಚಂದ್ರ ಸ್ವಾಗತಿಸಿದರು. ಸುಳ್ಯ ಶಾಸಕ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಮತ್ತಿತರರು ನುಡಿನಮನ ಸಲ್ಲಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ"