ಎಸ್ ಸಿ ಡಿಸಿಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

April 23, 2020
10:25 PM

ಸುಳ್ಯ: ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ಪತ್ರಕರ್ತರಿಗೆ ಕೊಡಮಾಡಿದ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರ‌ಮ  ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆಯಿತು.

Advertisement
Advertisement
Advertisement

ಸಮಾರಂಭದ ಅಧ್ಯಕ್ಷತೆ ವಹಿಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಕೋವಿಡ್ ಬಾದೆಯಿಂದ ಜಗತ್ತೇ ಈಗ ಸಂಕಷ್ಟದಲ್ಲಿರುವಾಗ ಪರಸ್ಪರ ಸಹಕಾರ ಮತ್ತು ಸಹಾಯ ಅತೀ ಅಗತ್ಯ. ಈ ನಿಟ್ಟಿನಲ್ಲಿ ಎಸ್ ಡಿಸಿಸಿ ಬ್ಯಾಂಕ್ ನ ಕಾರ್ಯ ಮಾದರಿಯಾಗಿದೆ ಎಂದರು.

Advertisement

ಮುಖ್ಯ ಅತಿಥಿಯಾಗಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಮಾತನಾಡಿ ಆಪತ್ತು ಕಾಲದಲ್ಲಿ ಅದನ್ನು ಎದುರಿಸಲು ಸರ್ಕಾರದ ಜೊತೆ ಕೈ ಜೋಡಿಸುವುದರ ಜೊತೆಗೆ ಸಮಾಜದ ಎಲ್ಲರಿಗೂ ಎಸ್ ಸಿ ಡಿಸಿಸಿ ಬ್ಯಾಂಕ್ ಸಹಾಯ ಹಸ್ತವನ್ನು ನೀಡುತಿದೆ. ಕೋವಿಡ್ ಮಹಾ ಮಾರಿಯನ್ನು ಎದುರಿಸುವಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತರು, ಪತ್ರಕರ್ತರು ಮತ್ತಿತರ ವಿಭಾಗಕ್ಕೆ ಪ್ರೋತ್ಸಾಹ ನೀಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್‌‌.ದೇವರಾಜ್ ಮಾತನಾಡಿ ಪ್ರಳಯ, ಪ್ರಕೃತಿ ವಿಕೋಪ, ಕೋವಿಡ್ ಹೀಗೆ ಯಾವುದೇ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವ ಸಂದರ್ಭದಲ್ಲಿಯೂ ಎಸ್ ಸಿಡಿಸಿಸಿ ಬ್ಯಾಂಕ್ ಸಮಾಜಕ್ಕೆ ಸ್ಪಂದನೆ ನೀಡುತಿದೆ ಎಂದರು.

Advertisement

ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ ಮಾತನಾಡಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಜಾಗೃತಿ ಮೂಡಿಸಲು ಪತ್ರಕರ್ತರು ಪ್ರಮುಖ ಪಾತ್ರ ನಿರ್ವಹಿಸುತ್ತಾರೆ. ಪತ್ರಕರ್ತರಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಕರ್ತವ್ಯ ಎಂದರು.

ಸುಳ್ಯ ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಮತ್ತು ಇತರ ಪತ್ರಕರ್ತರಿಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.

Advertisement

ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಹರೀಶ್ ಬಂಟ್ವಾಳ್ ವಂದಿಸಿದರು.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror