ಐವರ್ನಾಡು: ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬಂದಿ, ಲೇಖಪಾಲೆ ಭವಾನಿ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸಂಘದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಐವರ್ನಾಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಸಂಘದ ಮಾಜಿ ಅಧ್ಯಕ್ಷ ಡಾ| ಬಾಲಸುಬ್ರಹ್ಮಣ್ಯ ಭಟ್ ಭವಾನಿ ಹಾಗು ಜನಾರ್ಧನ ಗೌಡ ದಂಪತಿಯನ್ನು ಸನ್ಮಾನಿಸಿ ಶುಭಹಾರೈಸಿದರು. ಸನ್ಮಾಶನ ಸ್ವೀಕರಿಸಿದ ಭವಾನಿಯವರು ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ವಿಕ್ರಂ ಪೈ ವಹಿಸಿದ್ದರು. ವೇದಿಕೆಯಲ್ಲಿ ಐವರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಾಲಚಂದ್ರ ಪಲ್ಲತಡ್ಕ, ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ಐವರ್ನಾಡು ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ ಸನ್ಮಾನ ಪತ್ರ ವಾಚಿಸಿದರು. ಸಂಘದ ನಿರ್ದೇಶಕ ಕಿಶನ್ ಜಬಳೆ ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement