ಕಂಬಳ ಕೋಣಗಳ ಓಟಗಾರ ಶ್ರೀನಿವಾಸ ಗೌಡರಿಗೆ ಹೆಗ್ಗಡೆಯವರಿಂದ ಸನ್ಮಾನ

February 24, 2020
4:15 PM

ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.

ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್‍ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್‍ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್ ಜೈನ್, ಚಿಂತನ್‍ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್
ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ
April 19, 2026
7:29 AM
by: ಮಿರರ್‌ ಡೆಸ್ಕ್
ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!
April 18, 2026
1:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror