ಸುಳ್ಯ: ಸುಳ್ಯದ ಹಿರಿಯ ಉದ್ಯಮಿ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್(74) ಭಾನುವಾರ ರಾತ್ರಿ ನಿಧನರಾದರು. ಸುಳ್ಯದ ಹಿರಿಯ ಉದ್ಯಮಿಯಾಗಿದ್ದ ಅವರು ಅನ್ಸಾರಿಯಾ ಅನಾಥಾಲಯದ ಅಧ್ಯಕ್ಷರಾಗಿದ್ದರು. ಅನ್ಸಾರ್ ಸಂಸ್ಥೆಯ ಅಧ್ಯಕ್ಷರಾಗಿ, ಗಾಂಧಿನಗರ ಜುಮಾ ಮಸೀದಿ ಉಪಾಧ್ಯಕ್ಷರಾಗಿ, ವರ್ತಕ ಸಂಘದ ಪದಾಧಿಕಾರಿಯಾಗಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು.
Advertisement
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ತೀವ್ರ ಅನಾರೋಗ್ಯಕ್ಕೊಳಗಾಗಿದ್ದರು. ತಕ್ಷಣವೇ ಅವರನ್ನು ಸುಳ್ಯದ ಕೆಜಿವಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಕೊನೆಯುಸಿರೆಳೆದರು. ಅವರು ಪತ್ನಿ , ಮೂವರು ಪುತ್ರರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement