ಕರ್ನಾಟಕದ ನೆರೆ ಪರಿಹಾರ ಕಾಮಗಾರಿಗೆ ಧರ್ಮಸ್ಥಳದಿಂದ 25 ಕೋಟಿ ರೂಪಾಯಿ

August 18, 2019
11:00 AM

ಧರ್ಮಸ್ಥಳ: ರಾಜ್ಯದಲ್ಲಿ ಪ್ರವಾಹ ಪೀಡಿತ ಕುಟುಂಬಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 25 ಕೋಟಿ ರೂ. ಮಂಜೂರು ಮಾಡಲಾಗಿದೆ. ತಾನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿಯಾಗಿ ಪರಿಹಾರ ಮೊತ್ತವನ್ನು ನೀಡುವುದಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು.

Advertisement
Advertisement
Advertisement

ಅವರು ಶನಿವಾರ ಧರ್ಮಸ್ಥಳದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬೆಳ್ತಂಗಡಿ ತಾಲ್ಲೂಕಿನಲ್ಲಿ 174 ಮನೆಗಳು ಹಾನಿಯಾಗಿದ್ದು ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಕೈಗೊಂಡ ಸಂತ್ರಸ್ತ ಕುಟುಂಬಗಳ ಪರಿಹಾರ ಕಾಮಗಾರಿ ಧರ್ಮಸ್ಥಳದ ವತಿಯಿಂದ 50 ಲಕ್ಷ ರೂ. ನೆರವನ್ನು ಚೆಕ್ ಮೂಲಕ “ಕಾಳಜಿ ಬೆಳ್ತಂಗಡಿ ಫ್ಲಡ್‍ ರಿಲೀಫ್ ನಿಧಿ”ಗೆ ನೀಡಿದರು. ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಸಮೀಕ್ಷೆಯಂತೆರಾಜ್ಯದಲ್ಲಿ 20,827 ಮನೆಗಳಿಗೆ ಹಾನಿಯಾಗಿದ್ದು, 28,288 ಕುಟುಂಬಗಳ ಕೃಷಿ ಭೂಮಿ ನೀರು ಪಾಲಾಗಿವೆ. 22,711 ಕುಟುಂಬಗಳ ಗೃಹೋಪಯೋಗಿ ವಸ್ತುಗಳು ನಾಶವಾಗಿವೆ.

Advertisement

ಪಶ್ಚಿಮ ಘಟ್ಟ ಅಧ್ಯಯನ ಪೀಠ ಸ್ಥಾಪನೆಗೆ 2 ಕೋಟಿ ರೂ. ನೆರವು:
ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಈ ಬಾರಿ 500ಕ್ಕೂ ಮಿಕ್ಕಿದ ಸ್ಥಳಗಳಲ್ಲಿ ಭೂ ಕುಸಿತ ಉಂಟಾಗಿ ಆತಂಕಕ್ಕೆ ಕಾರಣವಾಗಿದೆ.ಪ್ರಾಕೃತಿಕ ದುರಂತದ ಸಾಧ್ಯತೆಗಳು ಹೆಚ್ಚಾಗಿವೆ. ಜೀವ ವೈವಿಧ್ಯಗಳಿಂದ ಕೂಡಿರುವ ಪಶ್ಚಿಮ ಘಟ್ಟ ಶ್ರೇಣಿಯು ಹಲವು ಕಾರಣಗಳಿಂದ ಸೂಕ್ಷ್ಮ ಸನ್ನಿವೇಶದ ಪ್ರದೇಶವಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪ್ರಾಕೃತಿಕ ಸಮತೋಲನ ಕಾಪಾಡಿಕೊಳ್ಳಲು ಹಾಗೂ ಇಲ್ಲಿ ವಾಸಿಸುವ ಜನರ ಹಿತಾಸಕ್ತಿರಕ್ಷಣೆಗಾಗಿ ಸಂಶೋಧನಾತ್ಮಕ ಅಧ್ಯಯನ ನಡೆಸಲುರಾಷ್ಟ್ರಮಟ್ಟದ ಸಂಶೋಧನಾ ಸಂಸ್ಥೆಯಲ್ಲಿ 2 ಕೋಟಿ ರೂ. ನೆರವಿನೊಂದಿಗೆ “ಪಶ್ಚಿಮ ಘಟ್ಟಅಧ್ಯಯನ ಪೀಠ” ಸ್ಥಾಪಿಸಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.ಸಂಶೋಧನಾ ವರದಿಯನ್ನು ಸರಕಾರದ ಗಮನಕ್ಕೆ ತರಲಾಗುವುದು.ಎರಡು ವರ್ಷಗಳ ಕಾಲಮಿತಿಯೊಂದಿಗೆಅಧ್ಯಯನ ಪೀಠವುಕ್ರಿಯಾಯೋಜನೆ ರೂಪಿಸಿ ಕಾರ್ಯ ನಿರ್ವಹಿಸಲಿದೆಎಂದು ತಿಳಿಸಿದರು.

ವಿಪತ್ತು ನಿರ್ವಹಣಾ ವೇದಿಕೆ ಸ್ಥಾಪನೆ: ಪ್ರಾಕೃತಿಕ ವಿಕೋಪಗಳಾದಾಗ ತುರ್ತುರಕ್ಷಣೆಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆ, ಪ್ರಗತಿ ಬಂಧುಒಕ್ಕೂಟ, ಸ್ವ-ಸಹಾಯ ಸಂಘಗಳ ಆಯ್ದ ಸದಸ್ಯರ ತಂಡವನ್ನು ರಾಜ್ಯದ ಪ್ರತಿತಾಲ್ಲೂಕು ಮಟ್ಟದಲ್ಲಿ ರಚಿಸಿ ನೂರು ಸದಸ್ಯರುಗಳಿರುವ ವಿಪತ್ತು ನಿರ್ವಹಣಾ ತಂಡ ರಚಿಸಲಾಗುವುದು.
ರಾಜ್ಯದಲ್ಲಿ ಎರಡು ಲಕ್ಷ ಸದಸ್ಯರನ್ನೊಳಗೊಂಡ ವಿಪತ್ತು ನಿರ್ವಹಣಾ ವೇದಿಕೆ ರಚಿಸಲಾಗುವುದು. ಇವರಿಗೆ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯಿಂದ ವಿಶೇಷ ತರಬೇತಿ ನೀಡಿ, ಅಗತ್ಯವಿರುವ ಉಪಕರಣಗಳನ್ನು ದಾಸ್ತಾನು ಇರಿಸಿಕೊಳ್ಳಲಾಗುವುದು.ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ವೇದಿಕೆ ತಕ್ಷಣ ಸ್ಪಂದಿಸಿ ಪರಿಹಾರ ನೀಡಲಿದೆ ಎಂದು ಅವರು ತಿಳಿಸಿದರು.

Advertisement

ಗ್ರಾಮಾಭಿವೃದ್ಧಿಯೋಜನೆಯಿಂದ ಈಗಾಗಲೇ ನೀಡಿದ ನೆರವು:

ಹತ್ತೊಂಬತ್ತು ಸಾವಿರ ಬೆಡ್‍ಶೀಟ್ ವಿತರಿಸಲಾಗಿದೆ.
• ಎರಡುಟನ್ ಬ್ಲೀಚಿಂಗ್ ಪೌಡರ್ ನೀಡಲಾಗಿದೆ.
• 4,990 ಕುಟುಂಬಗಳಿಗೆ ತಲಾರೂ. ಒಂದು ಸಾವಿರ ಮೌಲ್ಯದತುರ್ತು ನಿತ್ಯೋಪಯೋಗಿ ವಸ್ತುಗಳನ್ನು ನೀಡಲಾಗಿದೆ.
• ಜಾನುವಾರುಗಳಿಗೆ 5 ಲೋಡು ಹುಲ್ಲು ನೀಡಲಾಗಿದೆ.

Advertisement

ಹೇಮಾವತಿ ವಿ. ಹೆಗ್ಗಡೆಯವರು, ಶಾಸಕ ಹರೀಶ್ ಪೂಂಜ, ಗ್ರಾಮಾಭಿವೃದ್ಧಿಯೋಜನೆಯಕಾರ್ಯನಿರ್ವಾಹಕ ನಿರ್ದೇಶಕಡಾ. ಎಲ್. ಎಚ್.ಮಂಜುನಾಥ್ ಮತ್ತುಉಜಿರೆಯಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror