ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಅ.21ಕ್ಕೆ ಮತದಾನ, 24ಕ್ಕೆ ಫಲಿತಾಂಶ

September 21, 2019
3:50 PM

ನವದೆಹಲಿ: ಕರ್ನಾಟಕದಲ್ಲಿ ಅನರ್ಹಗೊಂಡಿರುವ 17 ಶಾಸಕರ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ತನ್ಮೂಲಕ ಅನರ್ಹಗೊಂಡಿರುವ ಶಾಸಕರಿಗೆ ಬಿಗ್​ ಶಾಕ್​ ನೀಡಿದೆ.

Advertisement
Advertisement
Advertisement

ಸೆ.23ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಸೆ.30 ಕೊನೇ ದಿನ. ನಾಮಪತ್ರ ಪರಿಶೀಲನೆ ಅಕ್ಟೋಬರ್​ 1ಕ್ಕೆ ನಡೆಯಲಿದೆ. ನಾಮಪತ್ರ ವಾಪಸು ಪಡೆಯಲು ಅಕ್ಟೋಬರ್​ 3 ಕೊನೇ ದಿನವಾಗಿದೆ. ಅಕ್ಟೋಬರ್​ 21ಕ್ಕೆ ಮತದಾನ ನಡೆಯಲಿದ್ದು, ಅಕ್ಟೋಬರ್​ 24ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

Advertisement

ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 15 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್​ ನಮ್ಮನ್ನು ಅನರ್ಹಗೊಳಿಸಿರುವ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದೆ. ಆದ್ದರಿಂದ ಈ ಕ್ಷೇತ್ರಗಳಿಗೆ ಚುನಾವಣೆ ನಡೆಸದಂತೆ ಅನರ್ಹಗೊಂಡಿರುವ ಶಾಸಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು. ಆದರೆ, ಚುನಾವಣಾ ಆಯೋಗ ಈ ಮನವಿಯನ್ನು ಪುರಸ್ಕರಿಸಿಲ್ಲ.

ಗೋಕಾಕ್, ಅಥಣಿ, ರಾಣೆಬೆನ್ನೂರು, ಕಾಗವಾಡ, ಹಿರೇಕೆರೂರು, ಯಲ್ಲಾಪುರ, ಯಶವಂತಪುರ, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆ.ಆರ್. ಪೇಟೆ, ಕೆ.ಆರ್. ಪುರಂ, ಮಹಾಲಕ್ಷ್ಮೀ ಲೇಔಟ್, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜ.4 ರಿಂದ ಮಂಗಳೂರಿನಲ್ಲಿ ಗೆಡ್ಡೆಗೆಣಸು-ಸೊಪ್ಪಿನ ಮೇಳ
January 3, 2025
9:57 PM
by: The Rural Mirror ಸುದ್ದಿಜಾಲ
ಜಾಗತಿಕ ತಾಪಮಾನ ಏರಿಕೆ | ಪಶ್ಚಿಮ ಘಟ್ಟಗಳು ಹೇಗೆ ಬದಲಾಗಿವೆ..? | ಕೃಷಿ ಉಳಿವಿಗೆ ಏನು ಮಾಡಬೇಕು..? | 2025 ರಲ್ಲಿ ಏನು ಮಾಡಬಹುದು..?
January 2, 2025
7:23 AM
by: ಮಹೇಶ್ ಪುಚ್ಚಪ್ಪಾಡಿ
ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳ ಸಾಗಣೆಯಾಗುತ್ತಿದ್ದ 379 ವನ್ಯಜೀವಿಗಳ ರಕ್ಷಣೆ
January 2, 2025
6:42 AM
by: The Rural Mirror ಸುದ್ದಿಜಾಲ
ಪಿಎಂ ಫಸಲ್‌‌‌‌ಬಿಮಾ ಯೋಜನೆ ವಿಸ್ತರಣೆ | ಕೇಂದ್ರ ಸಚಿವ ಸಂಪುಟ ಒಪ್ಪಿಗೆ
January 2, 2025
6:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror