ಕಲಿಕೆಯೊಂದಿಗೆ ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಅಳವಡಿಸಿಕೊಳ್ಳಿ

July 5, 2019
6:53 PM

ಸುಳ್ಯ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೇಶವನ್ನು ಮುನ್ನೆಡೆಸುವ ಪ್ರಜೆಗಳಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ವಿದ್ಯಾರ್ಜನೆಯೊಂದಿಗೆ ಶಿಸ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಿ ಎಂದು ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತೇಜೇಶ್ವರ್ ಕುಂದಲ್ಪಾಡಿ ಹೇಳಿದರು.
ಅವರು ಸುಳ್ಯ ಗಾಂದಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಒಂದು ರಾಜಕೀಯ ಪಕ್ಷದ ಪ್ರೇರಿತವಾಗಿರುವುದು ಕಲಿಕೆಯ ಮೇಲೂ ಪರಿಣಾಮ ಬೀರುತ್ತದೆ.ಈ ನಿಟ್ಟಿಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ರಾಜಕೀಯಕ್ಕೆ ಇಳಿಯಬಾರದು.ಸರಕಾರಿ ಶಾಲೆಗಳು ಉಳಿಯಬೇಕಾದರೆ ಶಾಲೆಗೆ ಉತ್ತಮ ಫಲಿತಾಂಶ ಬರಬೇಕು.ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು,ಶಿಕ್ಷಕರು ಪ್ರಯತ್ನ ಮಾಡಬೇಕಾಗಿದೆ ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕಿ ನಳೀನಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಲೇಜು ವಿಭಾಗದ ಆಂಗ್ಲಭಾಷಾ ಶಿಕ್ಷಕ ಅಬ್ದುಲ್‍ಸಮದ್ , ಹೈಸ್ಕೂಲ್ ವಿಭಾಗದ ಕನ್ನಡ ಶಿಕ್ಷಕ ಅರುಣಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ವಿದ್ಯಾರ್ಥಿ ನಾಯಕ ಮಹಮ್ಮದ್ ಶಕೀರ್ ಹಾಗೂ ಶಾಲಾ ಮಂತ್ರಿಗಳು,ವಿವಿಧ ಸಂಘದ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಕ್ಷಕ ಚಿನ್ನಪ್ಪ ಗೌಡ ಪ್ರಾಸ್ತವಿಕವಾಗಿ ಮಾತನಾಡಿದರು.ವಿದ್ಯಾರ್ಥಿನಿ ದಿವ್ಯ ಸ್ವಾಗತಿಸಿ,ಭವ್ಯ ವಂದಿಸಿದರು.ಮುಬಿನ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror