ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದು ತಡೆಗೆ ಸಂಸದ ನಳಿನ್ ಒತ್ತಾಯ

July 3, 2019
8:35 PM

ಮಂಗಳೂರು: ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದನ್ನು ತಡೆಯುವ ಕುರಿತು ಕೇಂದ್ರ ಸರಕಾರವು ಗಮನಹರಿಸಬೇಕು ಹಾಗೂ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು  ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಸರಕಾರವನ್ನು  ಒತ್ತಾಯಿಸಿದ್ದಾರೆ.

Advertisement
Advertisement

ಬುಧವಾರದಂದು ಲೋಕಸಭೆಯ ಶೂನ್ಯವೇಳೆಯಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಧ್ವನಿ ಎತ್ತಿದ ಸಂಸದ ನಳಿನ್ ಕುಮಾರ್ ಕಟೀಲು, ಅಡಿಕೆ ಆಮದು ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಸಂಸದರು ಕೇಂದ್ರ ಸರಕಾರವನ್ನು ಆಗ್ರಹಿಸಿದರು. ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಇವೆ.  ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು  ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.
ದೇಶದಲ್ಲಿ ಅಡಿಕೆ ಮಧ್ಯವರ್ತಿಗಳು ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಸ್ಟಂ ತೆರಿಗೆ ವಂಚಿಸಿ ಗಡಿಪ್ರದೇಶದಿಂದ ಅಕ್ರಮವಾಗಿ ಆಮದು ಮಾಡಿಕೊಳ್ಳುತ್ತಿರುವುದರಿಂದ ಹಾಗೂ ಕೊಳೆರೋಗ ಮತ್ತು ಹಳದಿರೋಗಳಗಳಂತಹ  ರೋಗಗಳಿಗೆ ತುತ್ತಾಗಿ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆಗೆ ಬೆಲೆ ಕುಸಿಯುತ್ತಿದೆ. ಅಡಿಕೆ ಮಧ್ಯವರ್ತಿಗಳು ಕಸ್ಟಂ ತೆರಿಗೆ ವಂಚಿಸಿ ಮಾಡುತ್ತಿರುವ ಈ ಅಕ್ರಮ ಆಮದಿನಿಂದಾಗಿ ಕೇಂದ್ರ ಸರಕಾರಕ್ಕೆ ವರ್ಷಕ್ಕೆ ಸುಮಾರು ರೂ.5,000 ಕೋಟಿಗಿಂತಲೂ ಅಧಿಕ ನಷ್ಟ ಉಂಟಾಗುತ್ತಿದೆ ಎಂದರು. ಆದುದರಿಂದ ಕೇಂದ್ರ ಸರಕಾರ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ
February 15, 2026
5:50 AM
by: ಮಿರರ್‌ ಡೆಸ್ಕ್
ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO
February 15, 2026
5:43 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror