ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಶಾಶ್ವತ ಕುಡಿಯುವ ನೀರಿನ ಯೋಜನೆ : ರಮಾನಾಥ ರೈ

Advertisement

ಸುಳ್ಯ: ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲ ಆದ್ಯತೆಯಾಗಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

Advertisement

ಸುಳ್ಯದಲ್ಲಿ ನ.ಪಂ.ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಂದರ್ಭ ಸುಳ್ಯ ಕಲ್ಲುಮುಟ್ಲುವಿನಲ್ಲಿ ನೀರು ಸರಬರಾಜು ಮಾಡಲು ನಿರ್ಮಿಸಿದ ತಾತ್ಕಾಲಿಕ ಒಡ್ಡು ಮತ್ತು ಪಂಪ್ ಹೌಸ್ ಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು. ತಾತ್ಕಾಲಿಕ ಒಡ್ಡು ನಿರ್ಮಿಸಿದ ಸ್ಥಳದಲ್ಲಿ ಶಾಶ್ವತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ಶಾಶ್ವತವಾಗಿ ಶುದ್ಧ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

Advertisement
Advertisement

ಕೆಪಿಸಿಸಿ ಕಾರ್ಯದರ್ಶಿ ಹಾಗು ನ.ಪಂ‌ ಅಭ್ಯರ್ಥಿ ಎಂ.ವೆಂಕಪ್ಪ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಸುಳ್ಯ, ಮುಖಂಡರಾದ ಎಸ್.ಸಂಶುದ್ದೀನ್, ಜಿ.ಕೆ.ಹಮೀದ್, ಲಕ್ಷ್ಮಣ ಶೆಣೈ, ಶಾಫಿ ಕುತ್ತಮೊಟ್ಟೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಶಾಶ್ವತ ಕುಡಿಯುವ ನೀರಿನ ಯೋಜನೆ : ರಮಾನಾಥ ರೈ"

Leave a comment

Your email address will not be published.


*