ಕಾಟುಕುಕ್ಕೆ ಭಜನ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

July 14, 2019
6:03 PM

ಪುತ್ತೂರು: ಭಜನೆಯು ದೇವರನ್ನು ಕಾಣುವ ಪ್ರಯತ್ನವಾಗಿದ್ದು, ಭಜನಾ ಟ್ರಸ್ಟ್ ನಿರ್ಮಾಣದ ಮೂಲಕ ಸಂಘಟನಾತ್ಮಕವಾಗಿ ಭಗವಂತನನ್ನು ಕಾಣುವ ಪ್ರಯತ್ನವಾಗಿದೆ. ಭಜನೆಯು ಪ್ರೇರಣೆ ಸಂಘಟಿತವಾಗಿ ಬೆಳೆದಂತೆ ಸಮಾಜದಲಿ ಋಣಾತ್ಮಕ ಆಂಶಗಳು ದೂರವಾಗಲಿದೆ ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಕಮಲಾದೇವಿ ಪ್ರಸಾದ್ ಅಸ್ರಣ್ಣ ಹೇಳಿದರು.
ಅವರು  ಪುತ್ತೂರು ಶ್ರಿ ಮಹಾಲಿಂಗೇಶ್ವರ ದೇವಳದ ನಟರಾಜವೇದಿಕೆಯಲ್ಲಿ ನಡೆದ ಕಾಟುಕುಕ್ಕೆ ಭಜನ ಚಾರಿಟೇಬಲ್ ಟ್ರಸ್ಟ್ ಉದ್ಘಾಟಿಸಿ ಮಾತನಾಡಿದರು.
ಅತಿಥಿಯಾಗಿ ಭಾಗವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ನಮ್ಮ ಸಂಸ್ಕøತಿಯ ಭಾಗವಾಗಿದ್ದು, ಇದೀಗ ಅಳಿವಿನಂಚಿನಲ್ಲಿರುವ ಭಜನೆ, ಸಂಕೀರ್ತನೆಗಳನ್ನು ಮತ್ತೊಮ್ಮೆ ಬೆಳೆಸುವ ಪ್ರಯತ್ನ ಟ್ರಸ್ಟ್‍ನಿಂದ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಭಜನೆ ಹಾಡುವುದರಿಂದ ಮಕ್ಕಳಲ್ಲಿ ಸಾಹಿತ್ಯದ ಜೊತೆಗೆ ಜ್ಞಾನ ಮತ್ತು ಸಂಸ್ಕಾರದ ಬೆಳವಣಿಗೆಯಾಗುತ್ತದೆ ಎಂದರು.
ಹನುಮಗಿರಿ ಶ್ರೀ ರಾಮಾಂಜನೇಯ ದೇವಸ್ಥಾನದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಅಧ್ಯಕ್ಷತೆ ವಹಿಸಿದ್ದರು.  ದ.ಕ.ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಾರಂಪಾಡಿ ಉಮಾಮಹೇಶ್ವರ ದೇವಸ್ಥಾನದ ಉಪಾಧ್ಯಕ್ಷ ಮಧುಕರ ರೈ, ಮುಂಬಯಿಯ ಉದ್ಯಮಿ ಕುಕ್ಕುಂದೂರು ಚಂದ್ರಶೇಖರ ಶೆಟ್ಟಿ, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಭಜನಾಮೃತ ಭಾಗ-1, ಭಾಗ 2 ಮತ್ತು ವಿಜಯದಾಸರ ಪಂಚರತ್ನ ಸುಳಾದಿ ಎಂಬ ಭಜನ ಸಾಹಿತ್ಯ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಟ್ರಸ್ಟ್‍ನ ಅಧ್ಯಕ್ಷ ರಾಮಕೃಷ್ಣ ಕಾಟುಕುಕ್ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಟ್ರಸ್ಟ್‍ನ ಉಪಾಧ್ಯಕ್ಷ ಜಯರಾಮ ನೆಲ್ಲಿತ್ತಾಯ ಸ್ವಾಗತಿಸಿದರು. ಪತ್ರಕರ್ತ ಎಂ.ನಾ. ಚಂಬಲ್ತಿಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮಕ್ಕೆ ಮೊದಲು ಕಿಶೋರ್ ಪೆರ್ಲ ಮತ್ತು ಸಂಗಡಿಗರಿಂದ ದಾಸಭಕ್ತಿ ಭಜನಾಮೃತ ಹಾಗೂ ಭಜನಾರ್ಥಿಗಳಿಂದ ಸಮೂಹ ಗಾಯನ ನಡೆಯಿತು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಸನಾಂಬೆ ಹುಂಡಿ ಎಣಿಕೆ | 12.63 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ |
November 5, 2024
7:44 AM
by: The Rural Mirror ಸುದ್ದಿಜಾಲ
ಶಬರಿಮಲೆ | ಮಂಡಲ ಪೂಜೆ | ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ
November 3, 2024
7:12 AM
by: The Rural Mirror ಸುದ್ದಿಜಾಲ
ಕೂಡ್ಲಿಗಿ | ಪಂಡರಾಪುರ ಶ್ರೀಪಾಂಡುರಂಗ ದರ್ಶನಕ್ಕೆ ಭಕ್ತರ ಪಾದಯಾತ್ರೆ |
November 3, 2024
6:33 AM
by: The Rural Mirror ಸುದ್ದಿಜಾಲ
ಬೆಳಕಿನ ಹಬ್ಬ ದೀಪಾವಳಿ | ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಹಣತೆ | ಗ್ರಾಹಕರ ಮನಸೆಳೆಯುತ್ತಿರುವ ಮಣ್ಣಿನ ಹಣತೆ |
October 31, 2024
7:14 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror