ಕಾಣಿಯೂರು:ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ದೇವರ ಮೇಲೆ ಭಕ್ತಿಯಿದ್ದಾಗ, ದೇವರ ಆದೇಶವನ್ನು ಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ದೊರೆಯಲು ಸಾಧ್ಯವಾಗುತ್ತದೆ . ಸತ್ಯನಾರಾಯಣ ದೇವರ ಆರಾಧನೆ ಮಾಡುವುದರಿಂದ ಸಕಲ ಫಲಗಳು ಪ್ರಾಪ್ತಿಯಾಗಿ ಬದುಕಿನ ಉನ್ನತ್ತಿಯಾಗುತ್ತದೆ. ಸಾಮೂಹಿಕ ಭಜನೆಯಿಂದ, ಭಕ್ತಿ ಭಾವದ ಆರಾಧನೆಯಿಂದ ಮನಶಾಂತಿ ಸಿಗುತ್ತದೆ ಎಂದರು.
ಅರ್ಚಕರಾದ ಸತ್ಯನಾರಾಯಣ ಕಾರಂತ ರಾಮಕುಂಜ, ಅನಂತರಾಮ ಉಪಾಧ್ಯಾಯ ತುಂಬ್ಯ, ದೀಪಕ್ ಕಲ್ಪಡ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು.
ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ಸ್ವಾಗತಿಸಿದರು. ಮಂಡಳಿಯ ಪದಾಧಿಕಾರಿಗಳು ಸ್ವಾಮೀಜಿಯವರಿಗೆ ಫಲವಸ್ತು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ್ ತೋಟ, ಕಾರ್ಯದರ್ಶಿ ಜಯಂತ ಅಬೀರ ಹಾಗು ಸದಸ್ಯರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯಿಂದ ಶ್ರೀ ಸತ್ಯನಾರಾಯಣ ಪೂಜೆ"