ಕಾರ್ಮಿಕರ ಮಕ್ಕಳಿಗಾಗಿ ಧರ್ಮಸ್ಥಳದಲ್ಲಿ ವಿಶೇಷ ಶಿಬಿರ

Advertisement

ಧರ್ಮಸ್ಥಳ :  ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಲಹಾ ಸಮಿತಿಯ ಅಧ್ಯಕ್ಷರಾದ ಸುಪ್ರಿಯಾ ಹರ್ಷೇಂದ್ರ ಕುಮಾರ್ ನಿರ್ದೇಶನದಂತೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.
ವಲಸೆ ಬಂದ ಕಾರ್ಮಿಕರ ಮಕ್ಕಳಲ್ಲಿ ಕೀಳರಿಮೆ ಹೋಗಲಾಡಿಸಿ ಅವರ ಕಲಿಕಾ ಸಾಮರ್ಥ್ಯ  ವೃದ್ಧಿಗಾಗಿ ಶಿಬಿರವನ್ನು ನಡೆಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಎಂ.ವಿ. ಪರಿಮಳಾ ನೇತೃತ್ವದಲ್ಲಿ ಶಾಲಾ ಶಿಕ್ಷಕರು, ಶಿಕ್ಷಕಿಯರು ಸಂಘಟಿತರಾಗಿ ಶಿಬಿರವನ್ನು ಯೋಜಿಸಿದರು. ಕಲಿಕೆ ಕಷ್ಟವಾಗಬಾರದು. ಇಷ್ಟವಾಗಬೇಕು. ಶಿಕ್ಷಣ ಶಿಕ್ಷೆ ಆಗದೆ ಸಂತಸದಾಯಕ ಕಲಿಕೆಯಾಗಬೇಕು. ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೊಂದಿಗೆ ಸಮಾಜದ ಸಭ್ಯ ನಾಗರಿಕರನ್ನು ರೂಪಿಸುವುದೇ ಶಿಕ್ಷಣದ ಗುರಿಯಾಗಿದೆ. ಈ ಉದ್ದೇಶದಿಂದ ಶಿಬಿರದಲ್ಲಿ ಶಿಸ್ತು, ಸಂಯಮ, ಸಮಯ ಪಾಲನೆ, ಮಾನವೀಯ ಮೌಲ್ಯಗಳ ಉದ್ದೀಪನ, ನೈತಿಕತೆ, ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸಾಮರಸ್ಯದ ಜೀವನ, ಇತ್ಯಾದಿಗಳ ಬಗ್ಯೆ ಸಂಪನ್ಮೂಲ ವ್ಯಕ್ತಿಗಳು ವಿಶೇಷ ತರಬೇತಿ ನೀಡಿದರು.
ಶಿಬಿರಕ್ಕೆ ಭೇಟಿ ನೀಡಿದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಶಿಬಿರದ ಚಟುವಟಿಕೆಗಳ ಬಗ್ಯೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ. ಶಿಬಿರದ ಸವಿವರ ಮಾಹಿತಿ ನೀಡಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಕಾರ್ಮಿಕರ ಮಕ್ಕಳಿಗಾಗಿ ಧರ್ಮಸ್ಥಳದಲ್ಲಿ ವಿಶೇಷ ಶಿಬಿರ"

Leave a comment

Your email address will not be published.


*