ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯಕ್ಕೆ ಬುಧವಾರ ಮಡಿಕೇರಿ 19ನೇ ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಕಮಾಂಡಿಂಗ್ ಆಫಿಸರ್ ವಿ.ಎಮ್ ನಾಯಕ್ ಹಾಗೂ ಎನ್‍ಸಿಸಿ ಘಟಕದ ಅಧಿಕಾರಿಗಳ ತಂಡ ಭೇಟಿ ನೀಡಿತು.
ಕಾಲೇಜಿನಲ್ಲಿ ಎನ್‍ಸಿಸಿ ಘಟಕ ಕುಕ್ಕೆ ಶ್ರೀ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧಿಕಾರಿಗಳನ್ನು ಸ್ವಾಗತಿಸಿದರು. ಬಳಿಕ ತಂಡವು ಕಾಲೇಜಿನ ಆಟದ ಮೈದಾನ ಸಭಾಂಗಣ ಹಾಗೂ ಎನ್‍ಸಿಸಿ ಘಟಕಕ್ಕೆ ಪೂರಕವಾಗಿ ಇರಬೇಕಿರುವ ವ್ಯವಸ್ಥೆಗಳ ಕುರಿತು ಪರಿಶೀಲಿಸಿತು. ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಮೈದಾನಕ್ಕೂ ತೆರಳಿ ಪರಿಶೀಲನೆ ನಡೆಸಲಾಯಿತು. ಕಾಲೇಜಿನಲ್ಲಿರುವ ವ್ಯವಸ್ಥೆಗಳ ಕುರಿತು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸಂದರ್ಭ ಉಪನ್ಯಾಸಕಿ ಅರ್ಪಣಾ ಜಿ.ಕೆ ಹಾಗೂ ಕಾಲೇಜು ಸಿಬಂದಿಗಳು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel