ಸುಳ್ಯ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಮತ್ತು ಸತೀಶ್ ಜಾರಕಿಹೋಳಿ ಅವರು ಪ್ರಮಾಣವಚನ ಮಾಡಿ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ರಾಜ್ಯದಾದ್ಯಂತ ಗ್ರಾಮ ಗ್ರಾಮಗಳಲ್ಲಿ ಕಾರ್ಯಕರ್ತರು ಪ್ರತಿಜ್ಞಾ ಸ್ವೀಕಾರ ಮಾಡಿದರು.
ಸುದ್ದಿವಾಹಿನಿ ಮತ್ತು ಝೂಮ್ ಆಪ್ ಮೂಲಕ ಪ್ರಮಾಣವಚನ ವೀಕ್ಷಿಸಿ ಗ್ರಾಮ ಗ್ರಾಮಗಳಲ್ಲಿ ಅದೇ ಸಂದರ್ಭದಲ್ಲಿ ಕಾರ್ಯಕರ್ತರು ಪ್ರತಿಜ್ಞಾ ಸ್ವೀಕಾರ ಮಾಡಿದರು. ಕಾರ್ಯಕರ್ತರ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಝೂಮ್ ಆಪ್ ಮೂಲಕ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು.
ಸುಳ್ಯ ತಾಲೂಕಿನಲ್ಲಿ ಒಟ್ಟು 29 ಕಡೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಜ್ಞಾ ಸ್ವೀಕಾರ ಮಾಡಿದರು. ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ನಗರ ಪಂಚಾಯಿತಿ ಮಾಜಿ ಅಧ್ಯಕ್ಷ ಹಿರಿಯರಾದ ಎಂ.ವಿ.ವೆಂಕಟ್ರಮಣ ಭಟ್ ಉದ್ಘಾಟಿಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ವೀಕ್ಷಕ ಜಿ.ಕೃಷ್ಣಪ್ಪ,ಕೆಪಿಸಿಸಿ ಸದಸ್ಯ ಡಾ.ಬಿ.ರಘು,ಡಿಸಿಸಿ ವೀಕ್ಷಕ ಮಹೇಶ್ ರೈ ಅಂಕೊತ್ತಿಮಾರ್, ಜಿ.ಪಂ.ಮಾಜಿ ಸದಸ್ಯ ಐ.ಕುಂಞಿಪಳ್ಳಿ, ನಗರ ಪಂಚಾಯಿತಿ ಮಾಜಿ ಸದಸ್ಯ ಜನಾರ್ಧನ ಗೌಡ ಮೋಂಟಡ್ಕ, ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟ ರಾಜಾರಾಮ ಭಟ್, ಎಸ್.ಸಂಶುದ್ದೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಮಾಜಿ ಶಾಸಕ ಕೆ.ಕುಶಲ, ಮತ್ತಿತರರು ಉಪಸ್ಥಿತರಿದ್ದರು.
ಎಂ.ಜೆ.ಶಶಿಧರ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿಯೂ ಕಾರ್ಯಕರ್ತರು ಪ್ರತಿಜ್ಞಾ ಸ್ವೀಕಾರ ಮಾಡಿದರು.