ಸುಳ್ಯ: ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ವತಿಯಿಂದ ಕೆವಿಜಿ ಸುಳ್ಯ ಹಬ್ಬದ ಅಂಗವಾಗಿ ಸುಳ್ಯ ತಾಲೂಕು ಮಟ್ಟದ ಪುರುಷರ ಕಬ್ಬಡ್ಡಿ ಪಂದ್ಯಾಟ ಚೆನ್ನಕೇಶವ ದೇವಸ್ಥಾನ ಸಮೀಪದ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಕೆಎಸ್ಎಸ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಕ ತುಕರಾಮ ಏನೆಕಲ್ ನೆರವೇರಿಸಿದರು.
ಸಭಾಧ್ಯಕ್ಷತೆಯನ್ನು ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬಿ.ಕೆ. ಮಾಧವ ವಹಿಸಿದ್ದರು. ಮುಖ್ಯಅತಿಥಿಯಾಗಿದ್ದ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಷನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸನ್ಮಾನ ನೆರವೇರಿಸಿದರು. ಸಮಾಜ ರತ್ನ ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರಿ ಪ್ರಶಸ್ತಿ ವಿಜೇತರಾದ ನಿತ್ಯಾನಂದ ಮುಂಡೋಡಿ, ರಾಷ್ಟ್ರೀಯ ಗೌರವ ಪ್ರಶಸ್ತಿ ಪಡೆದ ಕೆ.ಟಿ. ವಿಶ್ವನಾಥ್ ಅವರನ್ನು ಸನ್ಮಾನಿಸಲಾಯಿತು.
ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಸುಳ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಗೌರವಾಧ್ಯಕ್ಷ ಎನ್.ಎ ರಾಮಚಂದ್ರ, ಕೆವಿಜಿ ಸುಳ್ಯ ಹಬ್ಬ ಆಚರಣಾ ಸಮಿತಿ ಸ್ಥಾಪಕಾಧ್ಯಕ್ಷ ಎನ್. ಜಯಪ್ರಕಾಶ್ ರೈ, ಕೆವಿಜಿ ಸುಳ್ಯ ಹಬ್ಬ ಆಚರಣಾ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಾರ್ಯಾಧ್ಯಕ್ಷ ರತನ್ ಶೆಟ್ಟಿ, ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಅಶೋಕ್ ನೆಕ್ರಾಜೆ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಸಂಸುದ್ದೀನ್ ಮುಖ್ಯ ಅತಿಥಿಗಳಾಗಿದ್ದರು. ಸುಳ್ಯ ಹಬ್ಬ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಂತ ರೈ, ಕೋಶಾಧಿಕಾರಿ ಮಾಧವ ಬಿ.ಟಿ, ನಟರಾಜ್ ಎಂ.ಎಸ್, ಸಂದೀಪ್ ಪಲ್ಲೋಡಿ, ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದರು. ಸುಳ್ಯ ಹಬ್ಬ ಸಂಘಟನಾ ಸಮಿತಿಯ ಕ್ರೀಡಾ ಸಂಚಾಲಕ, ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಮಾಯಿಲಪ್ಪ ಕೆ. ವಂದಿಸಿದರು. ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.