ಕೊಡಗು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಉಸ್ತುವಾರಿಗಳಾಗಿ ಟಿ.ಎಂ. ಶಹೀದ್ ಮತ್ತು ಎಂ. ವೆಂಕಪ್ಪ ಗೌಡ ನೇಮಕ

October 20, 2019
6:54 PM

ಸುಳ್ಯ: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರಗಳಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯ ಉಸ್ತುವಾರಿಗಳಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಟಿ.ಎಂ. ಶಹೀದ್ ಮತ್ತು ಎಂ. ವೆಂಕಪ್ಪ ಗೌಡ ನೇಮಕಗೊಂಡಿದ್ದಾರೆ.

Advertisement

 

ಕ್ಷೇತ್ರಕ್ಕೆ ಭೇಟಿ ನೀಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿಧಾನಸಭೆ ಅಭ್ಯರ್ಥಿಗಳು ಹಾಗು ಡಿಸಿಸಿ, ಬಿಸಿಸಿ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಸಂಪರ್ಕಿಸಿ ಅಭಿಪ್ರಾಯ ಕ್ರೋಢೀಕರಿಸಿ ಒಮ್ಮತದ ವ್ಯಕ್ತಿಗಳನ್ನು ಬ್ಲಾಕ್ ಅಧ್ಯಕ್ಷರಾಗಿ ನೇಮಿಸಲು ಶಿಫಾರಸ್ಸು ಮಾಡಲು ಕೆಪಿಸಿಸಿ ಇವರಿಗೆ ಸೂಚನೆ ನೀಡಿದೆ. ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಯ ವಿರಾಜಪೇಟೆ, ಪೊನ್ನಂಪೇಟೆ ಹಾಗು ನಾಪೊಕ್ಲು ಬ್ಲಾಕ್ ಗಳ ಉಸ್ತುವಾರಿ ಟಿ.ಎಂ. ಶಹೀದ್ ಗೆ ಮತ್ತು ಮಡಿಕೇರಿ ಕ್ಷೇತ್ರದ ಬ್ಲಾಕ್ ಗಳ ಉಸ್ತುವಾರಿ ಎಂ. ವೆಂಕಪ್ಪ ಗೌಡರಿಗೆ ನೀಡಲಾಗಿದೆ.

ಕೊಡಗು ಜಿಲ್ಲೆಯ ಬ್ಲಾಕ್ ಸಮಿತಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಸ್ಥಳೀಯ ಮುಖಂಡರು ಮನವಿ ಮಾಡಿರುವ ಹಿನ್ನಲೆಯಲ್ಲಿ ಒಮ್ಮತದ ಅಭ್ಯರ್ಥಿಯ ಆಯ್ಕೆಗೆ ಉಸ್ತುವಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಆದೇಶ ಮಾಡಿದೆ ಎಂದು ಟಿ‌.ಎಂ. ಶಹೀದ್ ತಿಳಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror