ಸಂಪಾಜೆ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಳದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಸ್ಥಳ ಗುರುತಿಸಲು ಪತ್ರ ಬರೆಯಲು ನಿರ್ಣಯಿಸಲಾಯಿತು. ಕಲ್ಲಾಳ ರಸ್ತೆಯನ್ನು ಗ್ರಾಮ ಸಡಕ್ ಯೋಜನೆಗೆ ಸೇರ್ಪಡೆ ಮಾಡಿ ಸರಕಾರಕ್ಕೆ ಅನುಧಾನ ಕೋರಿ ಪತ್ರ ಬರೆಯಲು ತೀರ್ಮಾನಿಸಲಾಯಿತು.
ರಸ್ತೆ, ಕುಡಿಯುವ ನೀರು, ಬೀದಿ ದೀಪಗಳ ಬಗ್ಗೆ ಚರ್ಚೆ ನಡೆಸಲಾಯಿತು. ಗ್ರಾಮದ ಪಂಚಾಯತ್ ರಸ್ತೆ ವಿಪರೀತ ಗಾಳಿ ಮಳೆಯಿಂದ ಹಾನಿಯಾದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಅನುದಾನ ಕೋರುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ವರದಿ ವಾಚಿಸಿದರು, ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಗಿರಿಜಾ, ಯಮುನಾ ಗಿರೀಶ್, ಕೃಷ್ಣ ಬೆಳ್ಚಪಾಡ, ರಾಜೇಶ್ವರಿ, ಮಾಲತಿ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement