ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 52,123 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದೆ. 775 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈವರೆಗೆ 34,968 ಮಂದಿ ಸಾವಿಗೀಡಾಗಿದ್ದು, 10,20,582 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 5,28,242 ಸಕ್ರಿಯ ಪ್ರಕರಣಗಳು ಇವೆ.
ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 3.9 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, 14,165 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 2.2 ಲಕ್ಷ ಮಂದಿಗೆ ಸೋಂಕು ತಗುಲಿದ್ದು, 3,659 ಮಂದಿ ಸಾವಿಗೀಡಾಗಿದ್ದಾರೆ. ದೆಹಲಿಯಲ್ಲಿ 1.3 ಲಕ್ಷ ಜನರಿಗೆ ಸೋಂಕು ದೃಢಪಟ್ಟಿದ್ದು, 3,881 ಮಂದಿ ಸಾವಿಗೀಡಾಗಿದ್ದಾರೆ. ಆಂಧ್ರಪ್ರದೇಶದಲ್ಲಿ 1.1 ಲಕ್ಷ ಜನರಿಗೆ ಸೋಂಕು ತಗುಲಿದ್ದು, 1,148 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಬುಧವಾರ ಒಂದೇ ದಿನ 5,503 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,12,504ಕ್ಕೆ ತಲುಪಿದೆ.