ಕೊರೊನಾ ಅಪ್ಡೇಟ್ಸ್ | ರಾಜ್ಯದಲ್ಲಿ ಸೋಮವಾರ 14 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ | ದೇಶದಲ್ಲಿ 4,213 ಪಾಸಿಟಿವ್ ಪ್ರಕರಣ |

May 11, 2020
3:42 PM

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ಕೊಂಚ ನೆಮ್ಮದಿ ತಂದಿದೆ. ಕಳೆದ 12 ಗಂಟೆಯಲ್ಲಿ  10 ಪ್ರಕರಣ ಮಾತ್ರವೇ ಪಾಸಿಟಿವ್ ಬಂದಿದೆ. ಎರಡು ದಿನಕ್ಕೆ ಹೋಲಿಸಿದರೆ ಸೋಮವಾರ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ.

ಸೋಮವಾರ ಬೆಳಗಿನವರೆಗೆ ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಂಜೆಯ ವೇಳೆ ಮತ್ತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗುವ ಮೂಲಕ ರಾಜ್ಯದಲ್ಲಿ  ಒಟ್ಟು 14 ಪಾಸಿಟಿವ್ ಪ್ರಕರಣ ಕಂಡುಬಂದಿದೆ.

ದೇಶದಲ್ಲಿ ಮಾತ್ರಾ ಒಂದೇ ದಿನ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 67152 ಪೈಕಿ 20,917 ಮಂದಿ ಗುಣಮುಖರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror