ಕೊರೊನಾ ಭಯ-ಅಭಯ | ಕೇಂದ್ರ ಸರಕಾರದಿಂದ ಭಾರತದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ | ದೇಶದಾದ್ಯಂತ ಸಬ್ಸೀಡಿ ದರದಲ್ಲಿ ರೇಶನ್ |

March 25, 2020
3:43 PM

ಕೊರೊನಾ ವೈರಸ್ ಹರಡುವುದು  ತಡೆಗೆ ಕೇಂದ್ರ ಸರಕಾರ ಎ.14 ರ ವರೆಗೆ ಲಾಕ್ ಡೌನ್ ಘೋಷಿಸಿದೆ. ಇದೀಗ ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟ ಮಾಡಿದ್ದು ದೇಶದ 80 ಕೋಟಿ ಜನರಿಗೆ ಪಡಿತರ ನೀಡಲಾಗುತ್ತದೆ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದ  ಸಚಿವ ಪ್ರಕಾಶ್ ಜಾವೇಡ್ಕರ್, ದೇಶದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ ಜಾರಿ ಮಾಡಲಾಗುತ್ತದೆ. 3 ತಿಂಗಳಿಗೆ ಬೇಕಾಗುವಷ್ಟು ಪಡಿತರ ನೀಡಲಾಗುತ್ತದೆ. ಸಹಕಾರಿ ಸಂಘಗಳಿಗೆ ಇದಕ್ಕಾಗಿ ಫಂಡ್ ನೀಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಗೋಧಿ್ಗೆ 2 ರೂಪಾಯಿ ಹಾಗೂ ಅಕ್ಕಿಗೆ 3 ರೂಪಾಯಿಗೆ  ವಿತರಣೆ ಮಾಡಲಾಗುತ್ತದೆ. ಗುತ್ತಿಗೆ ಕಾರ್ಮಿಕರಿಗೆ ವೇತನ ಕಡಿತ ಮಾಡಬಾರದು ಎಂದು ಹೇಳಿದ್ದಾರೆ. ಈ ಸಂದರ್ಭ ಕಾಳಸಂತೆಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ  ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಹಣ ಪಡೆಯಲು ಯಾವುದೇ ಅಡ್ಡಿ ಇಲ್ಲ. ಎಟಿಎಂ ಮೂಲಕ ಪಡೆಯಬಹುದಾಗಿದೆ. ಇದಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ತುರ್ತು ಕೆಲಸ ಇದ್ದರೆ ಮಾತ್ರವೇ ಪೇಟೆಗೆ, ಬ್ಯಾಂಕ್ ಗೆ ತೆರಳಿ ಎಂದು ಸರಕಾರ ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror