ಕೊರೊನಾ ವೈರಸ್ | ದ ಕ ಜಿಲ್ಲೆಗೆ “ಗುಡ್” ಪ್ರೈಡೇ | ಒಟ್ಟು 5 ಮಂದಿ ಡಿಸ್ಚಾರ್ಜ್ | ನೊ ಪಾಸಿಟಿವ್ ಕೇಸ್ |

April 10, 2020
10:26 PM

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಶುಕ್ರವಾರ “ಗುಡ್” ಪ್ರೈಡೇ.  ಜಿಲ್ಲೆಯಲ್ಲಿ  ಶುಕ್ರವಾರವೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ. ಅದಕ್ಕಿಂತಲೂ 12 ಮಂದಿ ಸೋಂಕಿತರಲ್ಲಿ ಒಟ್ಟು  5 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಶುಕ್ರವಾರದಂದೂ ಕೂಡ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಈ ನಡುವೆ ಮಾ. 21ರಂದು ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ತಕ್ಷಣ ಆರೋಗ್ಯ ಇಲಾಖೆ ಅವರಿಗೆ ತೀವ್ರ ನಿಗಾದಲ್ಲಿರಿಸಿ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಅವರು ಗುಣಮುಖರಾಗಿದ್ದಾರೆ ಎಂದು ವಿವರ ನೀಡಿದರು. ಇದುವರೆಗೆ 402 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ನಡುವೆ ಕಾಸರಗೋಡಿನಲ್ಲಿ   ಶುಕ್ರವಾರ ಮೂವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 163ಕ್ಕೆ ತಲುಪಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror