ಕೊರೊನಾ ವೈರಸ್ | ದ. ಕ ಜಿಲ್ಲೆಗೆ ಸೋಮವಾರವೂ ಶುಭಸುದ್ದಿ| ಸುಳ್ಯದ ಯುವಕ ಡಿಸ್ಚಾರ್ಜ್ | ಯಾವುದೇ ಪಾಸಿಟಿವ್ ಕೇಸ್ ಇಲ್ಲ |

April 13, 2020
8:04 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ ಶುಭಸುದ್ದಿ. ಸೋಮವಾರ ಕೂಡಾ ಕೊರೊನಾ ವೈರಸ್ ಯಾವುದೇ ಪಾಸಿಟಿವ್ ಕೇಸ್ ಗಳು ಇಲ್ಲ. ಅದರ ಜೊತೆಗೆ ಸುಳ್ಯದ ಅಜ್ಜಾವರದ ಯುವಕ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 12 ಮಂದಿ ಕೊರೊನಾ ಸೋಂಕಿತರಲ್ಲಿ  8 ಮಂದಿ ಗುಣಮುಖರಾದಂತಾಗಿದೆ.

ಬೆಂಗಳೂರು, ‌ಮೈಸೂರು ನಂತರ 3 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6 ನೇ ಸ್ಥಾನಕ್ಕಿಳಿದಿದೆ. ಜಿಲ್ಲೆಯ ಮಟ್ಟಿಗೆ ಇದು ಸಮಾಧಾನಕರ ಸಂಗತಿ. ಆದರೂ, ಇನ್ನೂ ಬಹಳಷ್ಟು ಜಾಗರೂಕರಾಗಿರಬೇಕಿದೆ. ಜಿಲ್ಲೆಯಲ್ಲಿ 12 ಪ್ರಕರಣಗಳಲ್ಲಿ 8 ಮಂದಿ ಗುಣಮುಖರಾಗಿದ್ದಾರೆ.

ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ಸುಳ್ಯ ಅಜ್ಜಾವರದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿರಂತರ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸಿದ ಅವರು, ಸಂಪೂರ್ಣ ಗುಣಮುಖರಾಗಿದ್ದಾರೆ. ಎ. 11, 12ರಂದು ಮತ್ತೆ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಸೋಮವಾರದಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror