ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಬುಧವಾರ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಕೂಡಾ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಈ ಮೂಲಕ ದ.ಕ. ಕನ್ನಡ ಜಿಲ್ಲೆಯ ಜನತೆಯಲ್ಲಿದ್ದ ಆತಂಕ ಕೊಂಚ ದೂರವಾಗಿದೆ. ಆದರೆ ತೀವ್ರ ನಿಗಾ ಇನ್ನೂ ಮುಂದುವರಿಯಲಿದೆ. ಸರಕಾರದ ಆದೇಶ ಪಾಲನೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ.
ಬುಧವಾರದಂದು ಒಟ್ಟು 14 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಇನ್ನು 7 ಮಂದಿಯನ್ನು ನಿಗಾದಲ್ಲಿರಿಸಲಾಗಿದೆ. ಸುಮಾರು 10 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಎದುರು ನೋಡಲಾಗುತ್ತಿದೆ ಎಂದು ವಿವರಿಸಿದ ಜಿಲ್ಲಾದಿಕಾರಿಗಳು 20 ಮಂದಿ 28 ದಿನಗಳ ಕಾಲದ ಹೋಂ ಕ್ವಾರೆಂಟಿನ್ ಮುಗಿಸಿದ್ದಾರೆ. ಇನ್ನು ಇಂದು ಸುಮಾರು 27 ಮಂದಿ ಇಎಸ್ ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. 2771 ಮಂದಿ ಮನೆಯಲ್ಲೇ ನಿಗಾದಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಾಸರಗೋಡಿನಲ್ಲಿ ಕೂಡಾ ಬುಧವಾರ ಯಾವುದೇ ಸೋಂಕು ಪತ್ತೆಯಾಗಿಲ್ಲ.ಕಾಸರಗೋಡಿನಲ್ಲಿ ಕಳೆದ ನಾಲ್ಕು ದಿನಗಳ ಅವಧಿಯಲ್ಲಿ 42ರಷ್ಟು ಸೋಂಕಿತರು ಪತ್ತೆಯಾಗಿದ್ದರು. ಇದರಿಂದ ಜನತೆಯಲ್ಲಿ ಭಯದ ವಾತಾವರಣ ಉಂಟಾಗಿತ್ತು.