ಕೊರೊನಾ ವೈರಸ್ | ಬುಧವಾರ ದ ಕ ಜಿಲ್ಲೆಯಲ್ಲಿ ಎಲ್ಲಾ ನೆಗೆಟಿವ್ | ಕಾಸರಗೋಡಿನಲ್ಲೂ ನೆಗೆಟಿವ್ | ಇನ್ನೂ ಬೇಕಿದೆ ತೀವ್ರ ನಿಗಾ |

March 25, 2020
11:30 PM

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಬುಧವಾರ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಕೂಡಾ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಈ ಮೂಲಕ ದ.ಕ. ಕನ್ನಡ ಜಿಲ್ಲೆಯ ಜನತೆಯಲ್ಲಿದ್ದ ಆತಂಕ ಕೊಂಚ ದೂರವಾಗಿದೆ. ಆದರೆ ತೀವ್ರ ನಿಗಾ ಇನ್ನೂ ಮುಂದುವರಿಯಲಿದೆ. ಸರಕಾರದ ಆದೇಶ ಪಾಲನೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ.

ಬುಧವಾರದಂದು ಒಟ್ಟು 14 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಇನ್ನು 7 ಮಂದಿಯನ್ನು ನಿಗಾದಲ್ಲಿರಿಸಲಾಗಿದೆ.  ಸುಮಾರು 10 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಎದುರು ನೋಡಲಾಗುತ್ತಿದೆ ಎಂದು ವಿವರಿಸಿದ ಜಿಲ್ಲಾದಿಕಾರಿಗಳು  20 ಮಂದಿ 28 ದಿನಗಳ ಕಾಲದ ಹೋಂ ಕ್ವಾರೆಂಟಿನ್ ಮುಗಿಸಿದ್ದಾರೆ. ಇನ್ನು ಇಂದು ಸುಮಾರು 27 ಮಂದಿ ಇಎಸ್ ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. 2771 ಮಂದಿ ಮನೆಯಲ್ಲೇ ನಿಗಾದಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ ಕೂಡಾ ಬುಧವಾರ ಯಾವುದೇ ಸೋಂಕು ಪತ್ತೆಯಾಗಿಲ್ಲ.ಕಾಸರಗೋಡಿನಲ್ಲಿ ಕಳೆದ ನಾಲ್ಕು ದಿನಗಳ ಅವಧಿಯಲ್ಲಿ 42ರಷ್ಟು ಸೋಂಕಿತರು ಪತ್ತೆಯಾಗಿದ್ದರು. ಇದರಿಂದ ಜನತೆಯಲ್ಲಿ ಭಯದ ವಾತಾವರಣ ಉಂಟಾಗಿತ್ತು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror