ಕೊರೊನಾ ವೈರಸ್ ಭೀತಿ | ಮಾನಸಿಕ ಖಿನ್ನತೆಗೆ ಒಳಗಾಗಿ ಪೆಟ್ರೋಲ್ ಬಂಕ್ ನೌಕರ ಆತ್ಮಹತ್ಯೆ

March 27, 2020
3:27 PM

ಬಂಟ್ವಾಳ: ಪೆಟ್ರೋಲ್ ಪಂಪ್ ಉದ್ಯೋಗಿಯಾಗಿದ್ದ ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಮದ ಅಬ್ಬೆಟ್ಟು ಎಂಬಲ್ಲಿಯ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿ(56)  ತನಗೆ ಈ ಸೋಂಕು ತಗುಲಿದ್ದಲ್ಲಿ ತನ್ನಿಂದಾಗಿ ಮನೆಯವರಿಗೂ ಹರಡಬಹುದೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ  ಗುರುವಾರ ತಡರಾತ್ರಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿರುವ ತನಗೂ ತಗುಲಿರಬಹುದು ಎಂದು ಭಯಗೊಂಡಿದ್ದ ಸದಾಶಿವ ಶೆಟ್ಟಿ ಅವರು ಇನ್ನು  ವೈರಸ್  ತನ್ನಿಂದಾಗಿ ಮನೆಯವರಿಗೂ ಹರಡಬಹುದೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ
ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು
March 17, 2025
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror