ಕೊರೋನಾ ಅಪ್ಡೇಟ್ಸ್‌ | ಏರುತ್ತಲೇ ಇದೆ ಪಾಸಿಟಿವ್‌ ಪ್ರಕರಣಗಳು | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 237 | ರಾಜ್ಯದಲ್ಲಿ 4537 ಜನರಿಗೆ ಕೊರೋನಾ ಪಾಸಿಟಿವ್

July 18, 2020
8:53 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಶನಿವಾರ 237 ಮಂದಿಯಲ್ಲಿ  ಕೊರೋನಾ ಪಾಸಿಟಿವ್‌ ಕಂಡುಬಂದಿದ್ದರೆ 4 ಮಂದಿ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶನಿವಾರ  237 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3311ಕ್ಕೆ ಏರಿಕೆಯಾಗಿದೆ. ಶನಿವಾರ 109 ಮಂದಿ  ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ,  1848  ಸಕ್ರಿಯ ಪ್ರಕರಣಗಳಿವೆ. ಇದೇ ವೇಳೆ ಶನಿವಾರದಂದು ಮತ್ತೆ ನಾಲ್ವರು  ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಶನಿವಾರ 109 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು,  ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2088ಕ್ಕೆ ಏರಿಕೆಯಾಗಿದೆ.ಪ್ರಸ್ತುತ 492 ಸಕ್ರಿಯ ಪ್ರಕರಣಗಳಿವೆ. ಇಂದು 43 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1586 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 29 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಶನಿವಾರ 4537 ಜನರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ.  ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59632ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದೇ ದಿನ 2125 ಜನರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದ್ದು ಆತಂಕದ ಸ್ಥಿತಿಗೆ ತಳ್ಳಿದೆ.ರಾಜ್ಯದಲ್ಲಿ  ಒಂದೇ ದಿನ 93 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?
June 19, 2026
7:21 AM
by: ದ ರೂರಲ್ ಮಿರರ್.ಕಾಂ
ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ
June 19, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror