ಕೊರೋನಾ ಭೀತಿ| 1ರಿಂದ 9ನೇ ತರಗತಿಯವರೆಗಿನ ಮಕ್ಕಳು ಪರೀಕ್ಷೆ ಇಲ್ಲದೇ ಉತ್ತೀರ್ಣ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

April 2, 2020
2:11 PM

ಬೆಂಗಳೂರು: ಕೊರೋನಾ ಸೋಂಕು ಭೀತಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 1ನೇ ತರಗತಿಯಿಂದ 9ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ 1ರಿಂದ ಆರನೇ ತರಗತಿಯ ಮಕ್ಕಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಸೂಚಿಸಿದ್ದರು. ಇದೀಗ ಏಳು ಮತ್ತು ಎಂಟನೇ ತರಗತಿಗೆ ಕೂಡಾ ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಅವರು  ತಿಳಿಸಿದ್ದಾರೆ. ಇನ್ನು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಪರೀಕ್ಷೆಗಳು ನಡೆದಿದ್ದು ಇದರ ಆಧಾರದ ಮೇಲೆ 10ನೇ ತರಗತಿಗೆ ಪಾಸ್ ಮಾಡಲಾಗುವುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಏ.14ರ ನಂತರ ಪರಿಸ್ಥಿತಿ ಅವಲೋಕಿಸಿ, ಮಕ್ಕಳಿಗೆ ಸಮಯಾವಕಾಶ ನೀಡಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror