ಕ್ಷೌರಿಕರು ಮತ್ತು ಅಗಸರಿಂದ ಪರಿಹಾರ ಧನಕ್ಕೆ  ಅರ್ಜಿ ಆಹ್ವಾನ – ಅವಧಿ ವಿಸ್ತರಣೆ

June 30, 2020
9:06 PM

ಮಂಗಳೂರು:- ಕೋವಿಡ್-19 ಹಿನ್ನಲೆಯಲ್ಲಿ 18 ರಿಂದ 65 ವರ್ಷದೊಳಗಿನ ಕ್ಷೌರಿಕ ಮತ್ತು ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರವಾಗಿ ರೂ.5000 ಗಳನ್ನು ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement

ಫಲಾನುಭವಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾಸಿಂಧು ಕೇಂದ್ರದ ಸೇವಾಸಿಂಧು ಪೋರ್ಟಲ್ ನಲ್ಲಿ ನಿಗಧಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಿ, ಬ್ಯಾಂಕ್ ಖಾತೆಯೊಂದಿಗೆ ಜೋಡನೆಯಾಗಿರುವ ಆಧಾರ್ ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ತಮ್ಮ ಛಾಯಾ ಚಿತ್ರವನ್ನು ಅಪಲೋಡ್ ಮಾಡಬೇಕು.

ಕ್ಷೌರಿಕ, ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಕುರಿತು ಉದ್ಯೋಗ ಪ್ರಮಾಣ ಪತ್ರ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರರು, ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ. ಕಾರ್ಮಿಕ ಇಲಾಖೆಯ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು, ಯಾವುದಾದರೊಂದು ಅಧಿಕಾರಿಯಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡಬೇಕಾಗಿರುತ್ತದೆ. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನ ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರು ಮಾತ್ರ ಪರಿಹಾರ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಸೇವಾ ಸಿಂಧು ಪೋರ್ಟಲ್ ಮೂಲಕ  ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್‍ಬೀಡಿ ಎದುರು, ಬಂಟ್ಸ್‍ಹಾಸ್ಟೇಲ್, ಮಂಗಳೂರು-575003 ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
July 19, 2025
8:56 PM
by: ದ ರೂರಲ್ ಮಿರರ್.ಕಾಂ
ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ
ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
July 8, 2025
7:36 PM
by: ದ ರೂರಲ್ ಮಿರರ್.ಕಾಂ
“ರೈಲ್ ಒನ್” ಆ್ಯಪ್ ಲೋಕಾರ್ಪಣೆ
July 1, 2025
9:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group