ಗುತ್ತಿಗಾರಿನಲ್ಲಿ ಹೆಚ್ಚಾಗುತ್ತಿದೆ ಡೆಂಘೆ ಪ್ರಕರಣ

July 1, 2019
3:10 PM

ಸುಳ್ಯ: ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಡೆಂಘೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದೆ. ಇದರಲ್ಲಿ   ಗುತ್ತಿಗಾರು , ಬಳ್ಪ ಪ್ರದೇಶದಲ್ಲಿ  ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ. ಗುತ್ತಿಗಾರು ಸರಕಾರಿ ಆಸ್ಪತ್ರೆಗೆ ಗ್ರಾಮೀಣ ಭಾಗದಿಂದ ಜ್ವರದ ಲಕ್ಷಣಗಳಿಂದ ಬರುತ್ತಿದ್ದು ದಿನೇ ದಿನೇ ಜ್ವರ ಬಾಧಿತರ ಸಂಖ್ಯೆ ಹೆಚ್ಚಾಗುತ್ತಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇಲಾಖೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದರೂ ಮಳೆ ಹಾಗೂ ಬಿಸಿಲಿನ ಕಾರಣದಿಂದ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹೇಳುತ್ತಾರೆ. ಈಗಾಗಲೇ ಗುತ್ತಿಗಾರಿನಲ್ಲಿ 2 ಜನರಿಗೆ ಡೆಂಘೆ ದೃಢಪಟ್ಟರೆ 10 ಕ್ಕೂ ಅಧಿಕ ಮಂದಿಯ ರಕ್ತದ ಸ್ಯಾಂಪಲ್ ಖಾಸಗಿಯಾಗಿ ಕಳುಹಿಸಲಾಗಿದೆ. ಖಾಸಗಿ ವೈದ್ಯರು ನಿನ್ನೆ ಹಾಗೂ ಇಂದು ಸೇರಿ ಒಟ್ಟು 4 ಮಂದಿಯನ್ನು  ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯ ಹಾಗೂ ಪುತ್ತೂರಿಗೆ ಹೆಚ್ಚಿನ ಚಿಕಿತ್ಸೆಗೆ  ಕಳುಹಿಸಿದ್ದಾರೆ.

ಈಗ ಸಾರ್ವಜನಿಕರೇ ಎಚ್ಚರ ವಹಿಸಬೇಕಾಗಿದ್ದು ಜ್ವರ ಬಂದ ತಕ್ಷಣವೇ ಮುಂಜಾಗ್ರತಾ ಕ್ರಮ ಹಾಗೂ ರಕ್ತ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕಿದೆ.

2015-16 ರಲ್ಲಿ  ಡೆಂಘೆ ಜ್ವರಕ್ಕೆ ಗುತ್ತಿಗಾರು ಗ್ರಾಮ ತತ್ತರಿಸಿತ್ತು. ಹಲವಾರು ಮಂದಿ ಡೆಂಘೆ ಜ್ವರದಿಂದ ಬಳಲಿದ್ದರು. ಆರೋಗ್ಯ ಇಲಾಖೆ ಆರಂಭದಲ್ಲಿ ಡೆಂಘೆ ಜ್ವರ ಇಲ್ಲವೆಂದು ಹೇಳಿತ್ತು, ಕೊನೆಗೆ ನಿಯಂತ್ರಣಕ್ಕೆ ಬಾರದಾಗಿತ್ತು. ಈ ಬಾರಿಯೂ ಮಳೆ ಹಾಗೂ ಬಿಸಿಲಿನ ವಾತಾವರಣ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror