ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು.
ಸಮಾರಂಭವನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಭಾನು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ವಹಿಸಿದ್ದರು. ಅತಿಥಿಗಳಾಗಿ ಗುತ್ತಿಗಾರು ಗ್ರಾಪಂ ಪಿಡಿಒ ಶ್ಯಾಮಪ್ರಸಾದ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಗ್ರಾಪಂ ಸದಸ್ಯ ಬಿ ಕೆ ಶ್ರೀಧರ್ , ಸತೀಶ್ ಮೂಕಮಲೆ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು , ಮೊಸರು ಕುಡಿಕೆ ಮೊದಲಾದ ಕಾರ್ಯಕ್ರಮ ನಡೆಯುತ್ತಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel