ಗೆಲುವಿಗೆ ಸುಳ್ಯ ಕ್ಷೇತ್ರ ಶಕ್ತಿ ತುಂಬಿದೆ, ಸುಳ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ: ನಳಿನ್‍ಕುಮಾರ್ ಕಟೀಲ್ ಭರವಸೆ

Advertisement

ಸುಳ್ಯ: ಸುಳ್ಯ ಕ್ಷೇತ್ರವು ಬಿಜೆಪಿಯ ಗೆಲುವಿಗೆ ಪ್ರತಿ ಬಾರಿಯ ದೊಡ್ಡ ಶಕ್ತಿಯನ್ನು ತುಂಬಿದೆ. ಈ ಹಿನ್ನೆಲೆಯಲ್ಲಿ ಈ ಭಾಗದ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತೇನೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.

Advertisement

ಸುಳ್ಯ ಕಾಂತಮಂಗಲದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾಣಿ-ಮೈಸೂರು ರಾಜ್ಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ಕೈಗೆತ್ತಿಕೊಳ್ಳಲಾಗುವುದು. ಸಂಪಾಜೆ-ಅರಂತೋಡು-ಮರ್ಕಂಜ ಎಲಿಮಲೆ ರಸ್ತೆಯನ್ನು ಭಾರತ್‍ಮಾಲಾ ಯೋಜನೆಯಲ್ಲಿ ಸೇರ್ಪಡೆಗೆ ಪ್ರಯತ್ನ ನಡೆಸಲಾಗಿದ್ದು ಸರ್ವೆ ಕಾರ್ಯ ನಡೆದಿದೆ. ಸುಳ್ಯ ಕೇಂದ್ರೀಕೃತವಾಗಿ ಕೃಷಿ ಉದ್ಯಮ ವಲಯವನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸಿ ಅದರ ಬಗ್ಗೆ ಪ್ರಯತ್ನ ನಡೆಸಲಾಗಿತ್ತು. ಕೆಲವೊಂದು ತಾಂತ್ರಿಕ ತೊಡಕುಗಳಿಂದ ಅದು ಸಾಧ್ಯವಾಗಿಲ್ಲ ಮುಂದಿನ ದಿನಗಳಲ್ಲಿ ಅದರ ಬಗ್ಗೆ ಇನ್ನಷ್ಟು ಪ್ರಯತ್ನ ನಡೆಸಲಾಗುವುದು. ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆಯ ಬಗ್ಗೆ ಸರ್ವೆ ನಡೆಸಿ ಅದರ ಅನುಷ್ಠಾನಕ್ಕೆ ಪ್ರಯತ್ನ ನಡೆಸಲಾಗುವುದು. ಸುಳ್ಯ ನಗರದ ಸಮಗ್ರ ಅಭಿವೃದ್ಧಿಗೆ ನೀಲಿ ನಕಾಶೆ ತಯಾರಿಸಲಾಗುವುದು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ 16,500 ಕೋಟಿಯ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳು ಇನ್ನೂ ಇದೆ. ರೈಲ್ವೇ ವಿಭಾಗ ರಚನೆ. ವಿಮಾನ ನಿಲ್ದಾಣ ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ, ಬಂದರು ಅಭಿವೃದ್ಧಿ ಪಡಿಸುವ ಕೆಲಸಗಳು ಮುಂದುವರಿಸಲಾಗುವುದು.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯಮಶೀಲತೆಯನ್ನು ಬೆಳೆಸಿ ಉದ್ಯೋಗ ಸೃಷ್ಠಿಗೆ ಆದ್ಯತೆ ನೀಡಲಾಗುವುದು. ಧಾರ್ಮಿಕ ಪ್ರವಾಸೋದ್ಯಮ, ಹೆಲ್ತ್ ಟೂರಿಸಂ ಅಭಿವೃದ್ಧಿ ಪಡಿಸುವ ಯೋಚನೆ ನಡೆಸಲಾಗುವುದು ಎಂದು ಅವರು ಹೇಳಿದರು. ಆದರ್ಶ ಗ್ರಾಮವನ್ನು ಸರಕಾರದ ಗೈಡ್‍ಲೈನ್ಸ್ ಪ್ರಕಾರ ಮಾಡಲಾಗಿದೆ. ಬೋಗಾಯನ ಕೆರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಆಗಿದೆ ಚುನಾವಣಾ ನೀತಿ ಸಂಹಿತೆ ಮುಗಿದ ಕೂಡಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಎಂದರು.

 

Advertisement

ಶಾಸಕ ಅಂಗಾರ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ, ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಚಂದ್ರಶೇಖರ ಪನ್ನೆ, ಭಾಸ್ಕರ ರಾವ್ ಬಯಂಬು, ಜಿ.ಜಿ.ನಾಯಕ್, ಅಬ್ದುಲ್ ಕುಂಞ ನೇಲ್ಯಡ್ಕ, ವೆಂಕಟ್ರಮಣ ಮುಳ್ಯ, ರಾಜೇಶ್ ಮೇನಾಲ, ವಿನುತಾ ಪಾತಿಕಲ್ಲು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಗೆಲುವಿಗೆ ಸುಳ್ಯ ಕ್ಷೇತ್ರ ಶಕ್ತಿ ತುಂಬಿದೆ, ಸುಳ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ: ನಳಿನ್‍ಕುಮಾರ್ ಕಟೀಲ್ ಭರವಸೆ"

Leave a comment

Your email address will not be published.


*